ADVERTISEMENT

3.30 ಲಕ್ಷ ಕ್ವಿಂಟಲ್‌ ಬಿತ್ತನೆ ಬೀಜ ವಿತರಣೆ: ಕೃಷಿ ಸಚಿವ ಬಿ.ಸಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 24 ಜುಲೈ 2020, 10:54 IST
Last Updated 24 ಜುಲೈ 2020, 10:54 IST
ಸಚಿವ ಬಿ.ಸಿ ಪಾಟೀಲ
ಸಚಿವ ಬಿ.ಸಿ ಪಾಟೀಲ    

ಬೆಂಗಳೂರು:ರಾಜ್ಯದಲ್ಲಿ ಈ ಮುಂಗಾರು ಹಂಗಾಮಿನಲ್ಲಿ 5.97 ಲಕ್ಷ ಕ್ವಿಂಟಲ್ ಬಿತ್ತನೆ ಬೀಜ ಬೇಡಿಕೆ ಇದ್ದು, ರೈತ ಸಂಪರ್ಕ ಕೇಂದ್ರಗಳ ಮೂಲಕ ಈವರೆಗೂ 3.30 ಲಕ್ಷ ಕ್ವಿಂಟಲ್ ಬಿತ್ತನೆ ಬೀಜ ವಿತರಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ.

ಪ್ರಸ್ತುತ ರೈತ ಸಂಪರ್ಕ ಕೇಂದ್ರಗಳಲ್ಲಿ 52,110 ಕ್ವಿಂಟಲ್‌ ಬಿತ್ತನೆ ಬೀಜ ದಾಸ್ತಾನು ಇದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಅಲ್ಲದೆ, ಈ ಮುಂಗಾರು ಹಂಗಾಮಿನಲ್ಲಿ ಏಪ್ರಿಲ್ 1 ರಿಂದ ಜುಲೈ ಅಂತ್ಯದವರೆಗೆ ಒಟ್ಟು 13.99 ಲಕ್ಷ ಮೆಟ್ರಿಕ್‌ ಟನ್‌ ರಸಗೊಬ್ಬರಕ್ಕೆ ಬೇಡಿಕೆ ಇತ್ತು, ಇದರಲ್ಲಿ ಯೂರಿಯಾ 4.98 ಲಕ್ಷ ಮೆಟ್ರಿಕ್‌ ಟನ್‌, ಡಿಎಪಿ 3.06 ಲಕ್ಷ ಮೆಟ್ರಿಕ್‌ ಟನ್‌, ಎಂಒಪಿ 1.37 ಲಕ್ಷ ಮೆಟ್ರಿಕ್‌ ಟನ್‌ ಮತ್ತು ಕಾಂಪ್ಲೆಕ್ಸ್‌ 4.58 ಲಕ್ಷ ಮೆಟ್ರಿಕ್ ಟನ್‌ಗೆ ಬೇಡಿಕೆ ಇತ್ತು. ಈ ಪೈಕಿ ಜುಲೈ 23 ರವರೆಗೆ ಒಟ್ಟು 13.50 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಪೂರೈಕೆಯಾಗಿದೆ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.