(ಸಂಗ್ರಹ ಚಿತ್ರ)
ಬೆಂಗಳೂರು: ‘ಗೃಹಲಕ್ಷ್ಮಿ’ ಯೋಜನೆಗೆ ಸಂಬಂಧಿಸಿದಂತೆ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಏರ್ಪಡಿಸಿದ್ದ ದಾಖಲಾತಿ ಪರಿಶೀಲನೆ ಶಿಬಿರದಲ್ಲಿ ಸುಮಾರು 3.48 ಲಕ್ಷ ಗ್ರಾಮೀಣ ಮಹಿಳೆಯರು ಭಾಗವಹಿಸಿದ್ದರು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಒಟ್ಟು 3,48,386 ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಂಡು ತಮ್ಮ ಆಧಾರ್ ಕಾರ್ಡ್‌ಗಳನ್ನು ಪುನರ್ ಪರಿಶೀಲನೆಗೆ ಒಳಪಡಿಸಿದರು. ಮೊದಲ ದಿನ 91,681, ಎರಡನೇ ದಿನ 1,31,638 ಮತ್ತು ಮೂರನೇ ದಿನ 1,25,067 ಮಹಿಳೆಯರು ಶಿಬಿರದಲ್ಲಿ ಭಾಗವಹಿಸಿದ್ದರು. ಇದೇ ಅವಧಿಯಲ್ಲಿ 32,201 ಮಂದಿ ಮಹಿಳೆಯರು ಹೊಸದಾಗಿ ಅಂಚೆ ಕಚೇರಿಯ ಐಪಿಪಿಬಿ ಖಾತೆಗಳನ್ನು ತೆರೆದರು ಎಂದು ಪ್ರಿಯಾಂಕ್ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಿಂದ ಪುನರ್ ಪರಿಶೀಲನೆಗೆ ಒಳಪಟ್ಟ ಆಧಾರ್ ಕಾರ್ಡ್ ಹಾಗೂ ಐಪಿಪಿಬಿ ಖಾತೆಗಳನ್ನು ಆಧರಿಸಿ ’ಗೃಹಲಕ್ಷ್ಮಿ’ ಅರ್ಜಿಗಳನ್ನು ಪರಿಶೀಲಿಸಲಾಗುತ್ತದೆ ಎಂದೂ ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.