ADVERTISEMENT

3500 ಹಾಸ್ಟೆಲ್‌ಗಳ ಸ್ವರೂಪ ಬದಲು: ಖರ್ಗೆ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2018, 19:01 IST
Last Updated 16 ಅಕ್ಟೋಬರ್ 2018, 19:01 IST
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ   

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ 3,500 ಹಾಸ್ಟೆಲ್‌ಗಳ ಸ್ವರೂಪವನ್ನು ಸಮಗ್ರವಾಗಿ ಬದಲಾಯಿಸಲು ಚಿಂತನೆ ನಡೆಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ನಗರದಲ್ಲಿ ಮಂಗಳವಾರ ನಡೆದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ವಸತಿ ಶಿಕ್ಷಣ ಶಾಲೆಗಳ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿ ನಿಲಯಗಳ ವಾರ್ಡನ್‌ಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಹಾಸ್ಟೆಲ್‌ಗಳ ಸಮಗ್ರ ಸುಧಾರಣೆಗಾಗಿ ವರದಿ ನೀಡಲು ಸಮಿತಿ ರಚಿಸಲಾಗಿದ್ದು, ಸಮಿತಿ ತನ್ನ ವರದಿ ನೀಡಿದ ನಂತರ ಹಾಸ್ಟೆಲ್‌ಗಳ ಕಾರ್ಯವೈಖರಿಯಲ್ಲಿ ಬಹಳಷ್ಟು ಬದಲಾವಣೆ ಆಗಲಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.