ADVERTISEMENT

ಹೆಜ್ಜೆ ಗುರುತು: ₹ 367 ಕೋಟಿ ವೆಚ್ಚದಲ್ಲಿ ಪ್ರವಾಸಿ ತಾಣ ಅಭಿವೃದ್ಧಿ– ಸಿ. ಟಿ.ರವಿ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2019, 7:43 IST
Last Updated 7 ಡಿಸೆಂಬರ್ 2019, 7:43 IST
   

ಬೆಂಗಳೂರು: ರಾಜ್ಯದಲ್ಲಿ ಪ್ರವಾಸಿ ತಾಣಗಳಲ್ಲಿ ₹ 367 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ. ಟಿ.ರವಿ ಹೇಳಿದರು.

ತಾವು ಅಧಿಕಾರ ವಹಿಸಿಕೊಂಡು 100 ದಿನ ಪೂರೈಸಿದ ಹಿನ್ನೆಲೆಯಲ್ಲಿ ಶನಿವಾರ ಹೆಜ್ಜೆ ಗುರುತು ಕಿರು ಹೊತ್ತಗೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಬಾದಾಮಿ, ವೇಲೂರು, ಹಂಪಿ ಹಾಗೂ ವಿಜಯಪುರಗಳಲ್ಲಿ ತಾರಾ ಹೋಟೆಲ್ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದರು.

ಚಾಮುಂಡಿ ಬೆಟ್ಟದಲ್ಲಿ 'ಪ್ರಸಾದ' ಯೋಜನೆಯಡಿ ₹75 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು.

ADVERTISEMENT

ಶಾಸ್ತ್ರೀಯ ಭಾಷಾ ಅಧ್ಯಯನ ಕೇಂದ್ರ ಮೈಸೂರಿನಲ್ಲೇ ಬರಲಿದೆ. ಮೈಸೂರು ವಿವಿ 3 ಎಕರೆ ನೀಡಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.