ADVERTISEMENT

371(ಜೆ) ಗೆ ಗದಗಿನ ಗ್ರಾಮಗಳನ್ನು ಸೇರ್ಪಡೆ ಮಾಡಲ್ಲ: ಡಾ.ಶರಣಪ್ರಕಾಶ ಪಾಟೀಲ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2018, 10:46 IST
Last Updated 10 ಮಾರ್ಚ್ 2018, 10:46 IST
ಡಾ.ಶರಣಪ್ರಕಾಶ ಪಾಟೀಲ
ಡಾ.ಶರಣಪ್ರಕಾಶ ಪಾಟೀಲ   

ಕಲಬುರ್ಗಿ: ‘ಹೈದರಾಬಾದ್‌ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿರುವ 371(ಜೆ) ಅಡಿಯಲ್ಲಿ ಗದಗ ಜಿಲ್ಲೆಯ ಕೆಲವು ಗ್ರಾಮಗಳ ಸೇರ್ಪಡೆಗೆ ಯಾವ ಕಾರಣಕ್ಕೂ ಅವಕಾಶ ಕೊಡುವುದಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗದಗ ಜಿಲ್ಲೆ ಕೆಲವು ಗ್ರಾಮಗಳ ಸೇರ್ಪಡೆ ಬಗ್ಗೆ ಬಿಜೆಪಿಯಿಂದ ಅಪಪ್ರಚಾರ ನಡೆಯುತ್ತಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿಲ್ಲ. ಹರಪನಳ್ಳಿ ಬಳ್ಳಾರಿ ಜಿಲ್ಲೆ ವ್ಯಾಪ್ತಿಗೆ ಬರುವುದರಿಂದ 371(ಜೆ) ಸ್ಥಾನಮಾನ ನೀಡಲಾಗಿದೆ’ ಎಂದರು.

ಸಂಪುಟ ಸಭೆಯಲ್ಲಿ ಚಿವರ ಮಧ್ಯೆ ವಾಗ್ವಾದ ನಡೆದಿಲ್ಲ: ‘ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಸಚಿವರ ಮಧ್ಯೆ ಯಾವುದೇ ರೀತಿಯ ವಾಗ್ವಾದ ನಡೆದಿಲ್ಲ’ ಎಂದು  ಡಾ. ಶರಣಪ್ರಕಾಶ ಪಾಟೀಲ ಹೇಳಿದರು.

ADVERTISEMENT

‘ವಾಗ್ವಾದ ನಡೆದಿದೆ ಎಂಬುದು ಸುಳ್ಳು. ಕೆಲವರು ವಿನಾಕಾರಣ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಯಾವುದೇ ವಾಗ್ವಾದ ನಡೆದಿಲ್ಲ, ಯಾವ ಸಚಿವರೂ ರಾಜೀನಾಮೆ ನೀಡುವ ಬಗ್ಗೆ ಮಾತನಾಡಿಲ್ಲ. ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ’ ಎಂದರು.

‘ಅಭಿಪ್ರಾಯವನ್ನು ಹೇಳುವ ಹಕ್ಕು ಎಲ್ಲರಿಗೂ ಇದೆ. ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಕಾನೂನುಬದ್ಧವಾಗಿ ಏನು ಆಗಬೇಕು ಅದು ಆಗುತ್ತದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.