ADVERTISEMENT

₹39.50 ಲಕ್ಷ ನಗದು ವಶ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2018, 19:30 IST
Last Updated 4 ಏಪ್ರಿಲ್ 2018, 19:30 IST

ಬೆಂಗಳೂರು: ರಾಜ್ಯದ ವಿವಿಧೆಡೆ ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ ₹ 39,50 ಲಕ್ಷ ನಗದನ್ನು ಪೊಲೀಸರು ಮತ್ತು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ವಿಜಯಪುರ ಹೊರ ವಲಯದ ಇಂಡಿ ರಸ್ತೆಯ ಚೆಕ್‌ಪೋಸ್ಟ್‌ನಲ್ಲಿ ಮಂಗಳವಾರ ರಾತ್ರಿ ₹ 25 ಲಕ್ಷ ನಗದು ವಶಪಡಿಸಿಕೊಂಡಿದ್ದು, ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ವಿಜಯಪುರದ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ ಶಾಖೆಯಿಂದ ಸಾಲೋಟಗಿ ಶಾಖೆಗೆ ಭದ್ರತೆಯಿಲ್ಲದೆ ಹಣ ಸಾಗಿಸುತ್ತಿದ್ದರು. ನಗದನ್ನು ಜಿಲ್ಲಾ ಖಜಾನೆಗೆ ಜಮಾ ಮಾಡಲಾಗಿದೆ’ ಎಂದು ಚುನಾವಣಾಧಿಕಾರಿ ಜಿ.ಆರ್‌.ನಾಡಗೌಡ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ADVERTISEMENT

ಬಾಗಲಕೋಟೆ ಜಿಲ್ಲೆಯ ಟಕ್ಕಳಕಿ ಕ್ರಾಸ್ ಬಳಿ ಬುಧವಾರ ₹5,46,500 ನಗದು ವಶಪಡಿಸಿಕೊಳ್ಳಲಾಗಿದೆ.

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಬೆಲಗೂರು ಚೆಕ್‌ಪೋಸ್ಟ್‌ನ ಎಸ್‌ಎಸ್‌ಟಿ ತಂಡದವರು ₹ 4.04 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ.

ಮಂಡ್ಯದಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ ₹4 ಲಕ್ಷ ಹಾಗೂ ಶ್ರೀರಂಗಪಟ್ಟಣ ಚೆಕ್‌ಪೋಸ್ಟ್ ನಲ್ಲೂ ಕಾರಿನಲ್ಲಿದ್ದ ₹1 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.