ADVERTISEMENT

ಆರು ತಿಂಗಳಲ್ಲಿ 3,591 ಕಿ.ಮೀ. ಹೆದ್ದಾರಿ ನಿರ್ಮಾಣ: ಹೆದ್ದಾರಿ ಸಚಿವಾಲಯ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2020, 2:19 IST
Last Updated 10 ಅಕ್ಟೋಬರ್ 2020, 2:19 IST

ನವದೆಹಲಿ: ಕೋವಿಡ್‌–19 ಬಿಕ್ಕಟ್ಟಿನ ನಡುವೆಯೂ, ಪ್ರಸಕ್ತ ಹಣಕಾಸು ವರ್ಷದ ಮೊದಲ ಆರು ತಿಂಗಳ ಅವಧಿಯಲ್ಲಿ 3,591 ಕಿ.ಮೀ. ವ್ಯಾಪ್ತಿಯ ಹೆದ್ದಾರಿಗಳನ್ನು ನಿರ್ಮಿಸಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಶುಕ್ರವಾರ ತಿಳಿಸಿದೆ.

ಪ್ರತಿದಿನ 21.60ಕಿಲೋಮೀಟರ್‌ರಸ್ತೆ ನಿರ್ಮಾಣ ಮಾಡಲಾಗಿದೆ.ಈ ಹಣಕಾಸು ವರ್ಷದಲ್ಲಿ 11,000 ಕಿ.ಮೀ ರಸ್ತೆ ನಿರ್ಮಿಸುವ ಮಹತ್ವಾಕಾಂಕ್ಷೆಯ ಗುರಿ ಇದೆ ಎಂದು ಸಚಿವಾಲಯ ತಿಳಿಸಿದೆ.

ಏಪ್ರಿಲ್‌ನಿಂದ ಸೆಪ್ಟೆಂಬರ್‌ ತಿಂಗಳೊಳಗೆ 1,330 ಕಿ.ಮೀ. ಹೆದ್ದಾರಿ ನಿರ್ಮಿಸುವ ಯೋಜನೆ ಇದೆ ಎಂದುಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್‌ಎಚ್‌ಎಐ) ಈ ಹಿಂದೆ ತಿಳಿಸಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ರಸ್ತೆ ನಿರ್ಮಾಣ ಪ್ರಮಾಣ ಶೇಕಡ60ರಷ್ಟು ಹೆಚ್ಚಳ ಕಂಡಿದೆ.ಎನ್‌ಎಚ್‌ಎಐ ನೀಡಿರುವ ಯೋಜನೆಗಳ ಒಟ್ಟು ಮೌಲ್ಯ ₹ 47,289 ಕೋಟಿ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.