ADVERTISEMENT

ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾಗಿ ನಾಲ್ವರು

42 ಐಎಎಸ್‌ ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ

​ಪ್ರಜಾವಾಣಿ ವಾರ್ತೆ
Published 1 ಜನವರಿ 2021, 1:37 IST
Last Updated 1 ಜನವರಿ 2021, 1:37 IST

ಬೆಂಗಳೂರು: 1990ರ ಬ್ಯಾಚ್‌ನ ಐಎಎಸ್‌ ಅಧಿಕಾರಿಗಳಾದ ಇಂಧನ ಇಲಾಖೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್‌ ಗುಪ್ತ, ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಅತುಲ್‌ ಕುಮಾರ್ ತಿವಾರಿ ಹಾಗೂ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಜಿ. ಕುಮಾರ್‌ ನಾಯ್ಕ್ ಅವರಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಿ ಗುರುವಾರ ಆದೇಶ ಹೊರಡಿಸಲಾಗಿದೆ.

ನಾಲ್ವರನ್ನೂ ಅದೇ ಹುದ್ದೆಗಳಲ್ಲಿ ಮುಂದುವರಿಸಲಾಗಿದೆ. ಅವರೊಂದಿಗೆ ವಿವಿಧ ಶ್ರೇಣಿಯ 38 ಐಎಎಸ್‌ ಅಧಿಕಾರಿಗಳಿಗೆ ವೇತನ ಶ್ರೇಣಿಯ ಬದಲಾವಣೆಯೊಂದಿಗೆ ಬಡ್ತಿ ನೀಡಿದ್ದು, ಅದೇ ಹುದ್ದೆಗಳಲ್ಲಿ ಮುಂದುವರಿಸಿ ಆದೇಶ ಹೊರಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT