ADVERTISEMENT

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಗೆ 4 ತಂಡ ರಚನೆ: ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 2 ಮೇ 2025, 22:30 IST
Last Updated 2 ಮೇ 2025, 22:30 IST
<div class="paragraphs"><p>ಜಿ. ಪರಮೇಶ್ವರ</p></div>

ಜಿ. ಪರಮೇಶ್ವರ

   

ಬೆಂಗಳೂರು: ‘ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಗೆ ನಾಲ್ಕು ತಂಡಗಳನ್ನು ರಚಿಸಿದ್ದೇವೆ. ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರಾಜ್ಯದಲ್ಲಿ ನಾವು ಶಾಂತಿಯನ್ನು ಕಾಪಾಡಿಕೊಂಡು ಬಂದಿದ್ದೇವೆ. ಶಾಂತಿ ಕದಡಲು ಯಾರೇ ಯತ್ನಿಸಿದರೂ, ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಈ ವಿಚಾರದಲ್ಲಿ ರಾಜಿ ಇಲ್ಲ’ ಎಂದರು.

ADVERTISEMENT

‘ಮಂಗಳೂರಿನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ ಇದೆ. ಆದರೂ ತನಿಖೆ, ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆಗಾಗಿ ಹಿರಿಯ ಪೊಲೀಸ್‌ ಅಧಿಕಾರಿಯನ್ನು ನಿಯೋಜಿಸಿದ್ದೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.