ADVERTISEMENT

ರಾಜ್ಯದಲ್ಲಿ ನಾಲ್ವರಿಗೆ ಕೋವಿಡ್‌–19 ಸೋಂಕು: ಸರ್ಕಾರದ ಅಧಿಕೃತ ಘೋಷಣೆ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2020, 7:38 IST
Last Updated 10 ಮಾರ್ಚ್ 2020, 7:38 IST
   

ಬೆಂಗಳೂರು: ಬೆಂಗಳೂರಿನಲ್ಲಿ ಈ ವರೆಗೆ ನಾಲ್ವರಿಗೆ ಕೋವಿಡ್‌ 19 ಸೋಂಕು ತಗುಲಿರುವುದು ದೃಢಪಟ್ಟಿರುವುದಾಗಿ ಆರೋಗ್ಯ ಸಚಿವ ಶ್ರೀರಾಮುಲು ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ.

ಶ್ರೀರಾಮುಲು ಟ್ವೀಟ್‌

ಕರ್ನಾಟಕದಲ್ಲಿ ಇದುವರೆಗೆ 4 ವ್ಯಕ್ತಿಗಳಲ್ಲಿ #COVID19 ಸೋಂಕು ದೃಢಪಟ್ಟಿದ್ದು, ಅವರನ್ನು ಹಾಗೂ ಅವರ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿರಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ನಾಗರಿಕರು ಮುಂಜಾಗೃತ ಕ್ರಮ ವಹಿಸಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಕೋರುತ್ತೇನೆ #CoronavirusOutbreak

ADVERTISEMENT

ಇದೇ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌ ಅವರು ಇಲಾಖೆಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸುವುದಾಗಿ ತಿಳಿದು ಬಂದಿದೆ.

ಗುಲ್ಬರ್ಗದಲ್ಲಿ ವ್ಯಕ್ತಿಗೆ ಸೋಂಕು ಶಂಕೆ

ಗುಲ್ಬರ್ಗದಲ್ಲಿ ವ್ಯಕ್ತಿಯೊಬ್ಬರಿಗೆ ಕೊರೋನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದು ಅವರನ್ನು ಜಿಲ್ಲಾ ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕೆ ಸೋಂಕು ತಗುಲಿದೆಯೇ ಇಲ್ಲವೇ ಎಂಬುದು ಸ್ಪಷ್ಟವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.