ADVERTISEMENT

BJP ಅವಧಿಯಲ್ಲಿ ಶೇ 40 ಕಮಿಷನ್: ಹೆಚ್ಚಿನ ತನಿಖೆಗಾಗಿ SIT ರಚಿಸಲು ಸಂಪುಟ ತೀರ್ಮಾನ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2025, 11:17 IST
Last Updated 11 ಏಪ್ರಿಲ್ 2025, 11:17 IST
<div class="paragraphs"><p>ವಿಧಾನಸೌಧ</p></div>

ವಿಧಾನಸೌಧ

   

ಬೆಂಗಳೂರು: ಬಿಜೆ‍ಪಿ ಸರ್ಕಾರದ ವಿರುದ್ಧ ಗುತ್ತಿಗೆದಾರರು ಮಾಡಿದ್ದ ಶೇ 40ರ ಲಂಚ ಕುರಿತು ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ನೇತೃತ್ವದ ಆಯೋಗದ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಶುಕ್ರವಾರ ಮಂಡಿಸಲಾಯಿತು. ಈ ವರದಿಯ ಆಧಾರದಲ್ಲಿ ಹೆಚ್ಚಿನ ತನಿಖೆಗಾಗಿ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಕಾನೂನು ಸಚಿವ ಎಚ್‌.ಕೆ.ಪಾಟೀಲ ಅವರು ಸಂಪುಟ ಸಭೆಯ ಬಳಿಕ ಈ ಕುರಿತು ವಿವರ ನೀಡಿದರು.  ಶೇ 40 ಲಂಚ ನೀಡಿರುವುದು ಯಾವುದಾದರೂ ಪ್ರಕರಣಗಳಲ್ಲಿ ದೃಢಪಟ್ಟಿದೆಯೇ ಎಂಬ ಪ್ರಶ್ನೆಗೆ ಪಾಟೀಲ ಅವರು ನೇರ ಉತ್ತರ ನೀಡಲಿಲ್ಲ. ಇನ್ನಷ್ಟೇ ಅಧ್ಯಯನ ಮಾಡಬೇಕಿದೆ ಎಂದರು.

ADVERTISEMENT

ಆಯೋಗವು ಮೂರು ಲಕ್ಷ ಕಾಮಗಾರಿಗಳಲ್ಲಿ 1729 ಕಾಮಗಾರಿಗಳನ್ನು ಸ್ಯಾಂಪಲ್‌ ಆಗಿ ತೆಗೆದುಕೊಂಡು ಪರಿಶೀಲನೆ ನಡೆಸಿದೆ. ಕೆಲವು ಪ್ರಕರಣಗಳಲ್ಲಿ ವ್ಯತ್ಯಾಸಗಳಿವೆ. ಕೆಲವು ಕಾಮಗಾರಿಗಳಲ್ಲಿ ಹೆಚ್ಚು ಹಣ ಪಾವತಿಯಾಗಿದೆ. ಕೆಲವು ಕಾಮಗಾರಿಗಳ ಬಗ್ಗೆ ಸಂಶಯವಿದೆ. ಟೆಂಡರ್‌ ಪ್ರಕ್ರಿಯೆಯಲ್ಲಿ ಲೋಪವಾಗಿದೆ. ಆದ್ದರಿಂದ ಈ ಬಗ್ಗೆ ಹೆಚ್ಚಿನ ತನಿಖೆಗೆ ಎಸ್‌ಐಟಿ ರಚಿಸಲು ತೀರ್ಮಾನಿಸಲಾಯಿತು. ಎಸ್ಐಟಿಯಲ್ಲಿ ಪರಿಗಣಿತರು, ಅಧಿಕಾರಿಗಳು ಇರಲಿದ್ದಾರೆ ಎಂದು ಪಾಟೀಲ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.