ADVERTISEMENT

ಕುಡಿಯುವ ನೀರಿಗೆ ₹40 ಕೋಟಿ

​ಪ್ರಜಾವಾಣಿ ವಾರ್ತೆ
Published 14 ಮೇ 2019, 20:32 IST
Last Updated 14 ಮೇ 2019, 20:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದ ವಿವಿಧ 247 ನಗರ, ಪಟ್ಟಣಗಳಲ್ಲಿ ಕುಡಿಯುವ ನೀರಿನ ತುರ್ತು ಕಾಮಗಾರಿ ಕೈಗೊಳ್ಳಲು ₹40 ಕೋಟಿ ಅನುದಾನವನ್ನು ನಗರಾಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿದೆ.

ನಗರ ಸ್ಥಳೀಯ ಸಂಸ್ಥೆಗಳು ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ರಚಿಸಬೇಕು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅಗತ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆ ತಯಾರಿಸಿ, ಜಿಲ್ಲಾಧಿಕಾರಿಯಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಕ್ಕೆ ತರುವಂತೆ ಆದೇಶಿಸಲಾಗಿದೆ.

ಕಾಮಗಾರಿಗಳನ್ನು ಜಿಲ್ಲಾ ನಗರಾಭಿವೃದ್ಧಿ ಕೋಶದ ಮುಖಾಂತರ ನಿರ್ವಹಿಸಬೇಕು. ಈ ಹಣದಲ್ಲಿ ಕೊಳವೆ ಬಾವಿಗಳನ್ನು ಮತ್ತಷ್ಟು ಆಳಕ್ಕೆ ಕೊರೆಯಿಸುವುದು, ಸ್ವಚ್ಛಗೊಳಿಸುವುದು, ಅಂತರ್ಜಲದ ಸೆಲೆಗಳನ್ನು ಪುನರುಜ್ಜೀವನಗೊಳಿಸುವುದು, ನೀರು ಸರಬರಾಜು ಪೈಪ್‌ಗಳ ದುರಸ್ತಿ, ಪೈಪ್‌ಗಳ ಬದಲಾವಣೆ, ಅವಶ್ಯಕತೆ ಇದ್ದರೆ ಹೊಸದಾಗಿ ಕೊಳವೆ ಬಾವಿಗಳನ್ನು ಕೊರೆಯಿಸಲು ಈ ಹಣ ಬಳಸಬಹುದಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.