ADVERTISEMENT

ಬೆಳಗಾವಿ: 4 ಸಾವಿರ ದಾಟಿದ ಸೋಂಕಿತರ ಸಂಖ್ಯೆ

52 ಮಂದಿ ಆಸ್ಪತ್ರೆಯಿಂದ ಬಿಡುಗಡೆ, ನಾಲ್ವರು ಸಾವು

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2020, 15:00 IST
Last Updated 5 ಆಗಸ್ಟ್ 2020, 15:00 IST
ಬೆಳಗಾವಿ ಬಿಮ್ಸ್‌ ಆಸ್ಪತ್ರೆಯ ನೋಟ
ಬೆಳಗಾವಿ ಬಿಮ್ಸ್‌ ಆಸ್ಪತ್ರೆಯ ನೋಟ   

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 293 ಮಂದಿಗೆ ಕೋವಿಡ್–19 ಸೋಂಕು ದೃಢಪಡುವುದರೊಂದಿಗೆ, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ನಾಲ್ಕು ಸಾವಿರದ (4,221) ಗಡಿ ದಾಟಿದೆ. 2,969 ಸಕ್ರಿಯ ಪ್ರಕರಣಗಳಿವೆ.

ಬೆಳಗಾವಿ ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಮಚ್ಚೆಯಲ್ಲಿರುವ ಕೆಎಸ್‌ಆರ್‌ಪಿ ಪೊಲೀಸ್ ತರಬೇತಿ ಕೇಂದ್ರದ 12 ಮಂದಿ, ಕಂಗ್ರಾಳಿಯ 19 ಮಂದಿಗೆ ಸೋಂಕು ದೃಢಪಟ್ಟಿದೆ. ಉಳಿದಂತೆ ಬೈಲಹೊಂಗಲ, ಚಿಕ್ಕೋಡಿ, ಸವದತ್ತಿ, ಗೋಕಾಕ, ಅಥಣಿ, ರಾಮದುರ್ಗ, ಹುಕ್ಕೇರಿ ತಾಲ್ಲೂಕುಗಳಲ್ಲಿ ಕೋವಿಡ್ ಕಾಣಿಸಿಕೊಂಡಿದೆ. ಸೋಂಕಿತರನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿದ್ದ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಎಲ್ಲರೂ ಬೆಳಗಾವಿ ತಾಲ್ಲೂಕಿನವರು. ಇವರಲ್ಲಿ ಮೂವರು ಮಹಿಳೆಯರಿದ್ದಾರೆ. ಒಬ್ಬರು 30 ವರ್ಷದವರು. ಉಳಿದವರು 65ರಿಂದ 70 ವರ್ಷದವರು. ಅವರೆಲ್ಲರಿಗೂ ತೀವ್ರ ಉಸಿರಾಟದ ತೊಂದರೆ ಇತ್ತು ಎಂದು ಮಾಹಿತಿ ನೀಡಿದೆ. ಇದರೊಂದಿಗೆ ಸಾವಿಗೀಡಾದವರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ.

ADVERTISEMENT

52 ಮಂದಿ ಗುಣಮುಖರಾಗಿದ್ದು, ಅವರನ್ನು ಬಿಮ್ಸ್‌ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.