ADVERTISEMENT

ಪಿಎಸ್ಐ 402 ಹುದ್ದೆಗಳಿಗೆ 22ರಂದು ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2024, 15:30 IST
Last Updated 2 ಸೆಪ್ಟೆಂಬರ್ 2024, 15:30 IST
<div class="paragraphs"><p>ಪರೀಕ್ಷೆ</p></div>

ಪರೀಕ್ಷೆ

   

ಬೆಂಗಳೂರು: ಒಟ್ಟು 402 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಇದೇ ತಿಂಗಳ 22ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಪರೀಕ್ಷೆ ನಡೆಸಲು ಅಗತ್ಯವಾದ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

‘ಈ ಹುದ್ದೆಗಳಿಗೆ 66 ಸಾವಿರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಪರೀಕ್ಷೆಗೆ ಒಂದು ವಾರ ಮೊದಲು ಪ್ರವೇಶ ಪತ್ರ ಬಿಡುಗಡೆ ಮಾಡಲಾಗುವುದು’ ಎಂದು ಅವರು ತಿಳಿಸಿದ್ದಾರೆ.

ADVERTISEMENT

‘ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ ಪರೀಕ್ಷೆ ಇದೇ 29ರಂದು ನಡೆಯಲಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮಾತ್ರ ಅಕ್ಟೋಬರ್ 27ಕ್ಕೆ ನಡೆಯುವ ಪ್ರಮುಖ ಪರೀಕ್ಷೆಗೆ ಅರ್ಹತೆ ಪಡೆಯಲಿದ್ದಾರೆ. ಗ್ರಾಮ ಆಡಳಿತಾಧಿಕಾರಿ ಒಂದು ಸಾವಿರ ಹುದ್ದೆಗಳಿಗೆ 5.7 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಈ ಪರೀಕ್ಷೆಗೂ ತಯಾರಿ‌ ನಡೆಸಲಾಗಿದೆ‌’ ಎಂದು ಅವರು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.