ADVERTISEMENT

ಮಧ್ಯಾಹ್ನ ಉಪಾಹಾರ ಯೋಜನೆಗೆ ₹ 449.87 ಕೋಟಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2020, 16:10 IST
Last Updated 3 ನವೆಂಬರ್ 2020, 16:10 IST

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಜೂನ್‌ನಿಂದ ಅಕ್ಟೋಬರ್ ತಿಂಗಳವರೆಗಿನ ಐದು ತಿಂಗಳ ಅವಧಿಗೆ ಮಧ್ಯಾಹ್ನ ಉಪಾಹಾರ ಯೋಜನೆ‌ ಅನುಷ್ಠಾನಕ್ಕೆ‌ ರಾಜ್ಯ ಸರ್ಕಾರ ₹ 449.87 ಕೋಟಿ ಅನುದಾನ ಬಿಡುಗಡೆ ಮಾಡಿದೆ.

ಒಂದನೇ ತರಗತಿಯಿಂದ 10ನೇ ತರಗತಿವರೆಗೆ ಅರ್ಹ ಮಕ್ಕಳಿಗೆ ಆಹಾರ ಧಾನ್ಯ ಮತ್ತು ಅಗತ್ಯ ಪ್ರಮಾಣದ ತೊಗರಿ ಬೇಳೆ ವಿತರಿಸಲು ಈ ಅನುದಾನ ಬಳಕೆ ಆಗಲಿದೆ. ಕೊರೊನಾ ಸೋಂಕಿನ ಕಾರಣ ಶಾಲಾ ಮಕ್ಕಳಿಗೆ ವಿತರಿಸಲು ಶಾಲಾ ಹಂತದಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಸಮಗ್ರವಾದ ಮಾರ್ಗಸೂಚಿಯನ್ನು ಇಲಾಖೆಯ ಆಯುಕ್ತರು ಹೊರಡಿಸಬೇಕು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.

ಮಧ್ಯಾಹ್ನ ಉಪಾಹಾರ ಯೋಜನೆಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಅನುದಾನವನ್ನು ಶೀಘ್ರ ವೆಚ್ಚ ಮಾಡಿ, ಕೇಂದ್ರ ಸರ್ಕಾರದ ಪಾಲಿನ ಎರಡನೇ ಕಂತಿನ ಅನುದಾನ ಬಿಡುಗಡೆ ಮಾಡಲು ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲು ಇಲಾಖೆ ಕ್ರಮ ತೆಗೆದುಕೊಳ್ಳಬೇಕು ಎಂದೂ ಆದೇಶ ಹೇಳಲಾಗಿದೆ.

ADVERTISEMENT

‘ಈ ಅವಧಿಯ ಆಹಾರ ಧಾನ್ಯಗಳನ್ನು‌ ವಿತರಿಸಲು‌ ಇಲಾಖೆಯು ತುರ್ತು ಕ್ರಮ ತೆಗೆದುಕೊಳ್ಳಲಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.