ADVERTISEMENT

ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ 478 ಮಂದಿಗೆ ಕೋವಿಡ್ ದೃಢ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2020, 14:18 IST
Last Updated 16 ಆಗಸ್ಟ್ 2020, 14:18 IST

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 478 ಮಂದಿಗೆ ಕೋವಿಡ್–19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಣಮುಖರಾಗುವವರ ಸಂಖ್ಯೆಯೂ ಹೆಚ್ಚಿನ ಪ್ರಮಾಣದಲ್ಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ನಗರ ಹಾಗೂ ತಾಲ್ಲೂಕಿನ ವಿವಿಧೆಡೆ ಮತ್ತು ಗೋಕಾಕ ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಸೋಂಕಿತರ ಮನೆ ಹಾಗೂ ಕರ್ತವ್ಯದ ಸ್ಥಳಗಳನ್ನು ಸೀಲ್‌ಡೌನ್‌ ಮಾಡಲಾಗಿದೆ. ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್‌ ಮಾಡಲಾಗಿದೆ ಎಂದು ಹೇಳಿದೆ.

ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಾಲ್ಲೂಕಿನ ಇಬ್ಬರು ಹಾಗೂ ಗೋಕಾಕದ ಒಬ್ಬರು ಸೇರಿ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು ಎಂದು ಮಾಹಿತಿ ನೀಡಿದೆ.

ADVERTISEMENT

410 ಮಂದಿ ಗುಣಮುಖರಾಗಿದ್ದು, ಅವರನ್ನು ಬಿಮ್ಸ್‌ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.