ADVERTISEMENT

₹4.8 ಕೋಟಿ ಜಪ್ತಿ: ಸಂಸದ ಡಾ.ಕೆ.ಸುಧಾಕರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2025, 16:33 IST
Last Updated 30 ಜೂನ್ 2025, 16:33 IST
<div class="paragraphs"><p>ಹೈಕೋರ್ಟ್</p></div>

ಹೈಕೋರ್ಟ್

   

ಬೆಂಗಳೂರು: ಲೋಕಸಭೆ ಚುನಾವಣೆ ವೇಳೆ ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾದಾವರ ಗ್ರಾಮದಲ್ಲಿನ ಗೋವಿಂದಪ್ಪ ಅವರ ಮನೆಯಲ್ಲಿ ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ ₹4.8 ಕೋಟಿ ಮೊತ್ತದ ಪ್ರಕರಣದಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಪರಾಧ ಪರಿಗಣಿಸಿ ವಿಚಾರಣೆಗೆ ಮುಂದಾಗಿರುವ ನ್ಯಾಯಿಕ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. 

‘ನಮ್ಮ ವಿರುದ್ಧ ಹೊಸದಾಗಿ ಸಂಜ್ಞೇಯ ಅಪರಾಧ ಪರಿಗಣಿಸಿರುವುದನ್ನು ರದ್ದುಪಡಿಸಬೇಕು’ ಎಂದು ಕೋರಿ ಡಾ.ಕೆ.ಸುಧಾಕರ್ ಮತ್ತು ಗೋವಿಂದಪ್ಪ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಆರ್‌.ಕೃಷ್ಣಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ADVERTISEMENT

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ನೆಲಮಂಗಲ ಉಪ ವಿಭಾಗದ ಮಾದನಾಯಕನಹಳ್ಳಿ ಪೊಲೀಸ್‌ ಮತ್ತು ದೂರುದಾರ ದಶರಥ ಕುಂಬಾರ ಅವರಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು. ಸುಧಾಕರ್‌ ಪರ ಹೈಕೋರ್ಟ್‌ ವಕೀಲೆ ಸಂಜೀವಿನಿ ನಾವದಗಿ ವಕಾಲತ್ತು ವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.