ADVERTISEMENT

5 ರಂದು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ

​ಪ್ರಜಾವಾಣಿ ವಾರ್ತೆ
Published 3 ಮೇ 2014, 19:30 IST
Last Updated 3 ಮೇ 2014, 19:30 IST
5 ರಂದು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ
5 ರಂದು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ   

ಬೆಳಗಾವಿ: ‘ಪ್ರತಿ ಟನ್‌ ಕಬ್ಬಿಗೆ ಸರ್ಕಾರ ನಿಗದಿಪಡಿಸಿರುವ ದರವನ್ನು ರೈತರಿಗೆ ನೀಡಲೇಬೇಕು. ಈ ಕುರಿತು ಮತ್ತೊಮ್ಮೆ ಚರ್ಚಿಸಲು ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆಯನ್ನು ಮೇ 5 ರಂದು ಬೆಂಗಳೂರಿನಲ್ಲಿ ಕರೆಯಲಾಗಿದೆ’ ಎಂದು ಸಕ್ಕರೆ ಸಚಿವ ಪ್ರಕಾಶ ಹುಕ್ಕೇರಿ ತಿಳಿಸಿದರು.

ಶನಿವಾರ ಭೇಟಿಯಾದ ಪತ್ರಕರ್ತ­ರೊಂದಿಗೆ ಮಾತ­ನಾಡಿದ ಅವರು, ‘ಸಭೆಗೆ ಎಲ್ಲ ಕಾರ್ಖಾನೆಗಳ ಮಾಲೀಕರು ಬರಲಿದ್ದಾರೆ. ಸರ್ಕಾರದ ಪರವಾಗಿ ನಾನು, ಆಹಾರ ಮತ್ತು ನಾಗರಿಕ ಪೂರೈಕೆ ಮತ್ತು ಕಾನೂನು ಸಚಿವರು ಭಾಗ­ವಹಿಸುತ್ತೇವೆ. ಸಭೆಯ ನಿರ್ಣಯ­ವನ್ನು ಮುಖ್ಯಮಂತ್ರಿಗಳಿಗೆ ತಿಳಿಸಲಾಗು­ವುದು. ಮುಂದಿನ ಕ್ರಮವನ್ನು ಮುಖ್ಯ­ಮಂತ್ರಿಗಳು ಕೈಗೊಳ್ಳಲಿದ್ದಾರೆ’ ಎಂದರು.

ಕೃಷ್ಣಾ ನದಿಗೆ ನೀರು: ಕೃಷ್ಣಾ ನದಿಗೆ ನೀರು ಬಿಡುವಂತೆ ಈಗಾಗಲೇ ಮಹಾ­ರಾಷ್ಟ್ರ ಸರ್ಕಾರದ ಜೊತೆ ಮಾತುಕತೆ ನಡೆಸಲಾಗಿದೆ. ಜಲಸಂಪನ್ಮೂಲ ಸಚಿವರು ಸಹ ಪ್ರಯತ್ನ ಮುಂದುವರಿಸಿ­ದ್ದಾರೆ. ಕುಡಿಯುವ ನೀರಿನ ಸಮಸ್ಯೆ ಬಗ್ಗೆ ವಾಸ್ತವ ವರದಿಯನ್ನು ಅಧಿಕಾರಿಗಳಿಂದ ಪಡೆದು ಮಹಾರಾಷ್ಟ್ರಕ್ಕೆ ನಿಯೋಗ ತೆರಳಲಿದೆ. ಕೋಯ್ನಾ ಮತ್ತು ಕಾಳ­ಮ್ಮವಾಡಿ ಜಲಾಶಯಗಳಿಂದ ನೀರು ಬಿಡುವಂತೆ ಮನವಿ ಮಾಡಲಾಗುವುದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.