ಎಚ್.ಸಿ. ಮಹದೇವಪ್ಪ
ಬೆಂಗಳೂರು: ‘ಪರಿಶಿಷ್ಟ ಸಮುದಾಯದ ಜನರು ಮನೆ ನಿರ್ಮಿಸಿಕೊಳ್ಳಲು ₹5 ಲಕ್ಷ ಘಟಕ ನಿಧಿ ನಿಗದಿಗೊಳಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು’ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.
ವಿಧಾನಸೌಧದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪರಿಶಿಷ್ಟರ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿನ ವಸತಿ ರಹಿತ ಪರಿಶಿಷ್ಟರನ್ನು ಗುರುತಿಸಬೇಕು. ಕೃಷಿ ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳಲು ನೆರವು ನೀಡಬೇಕು. ಅನುದಾನ ಬಳಸಿಕೊಂಡು ಪರಿಶಿಷ್ಟರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ರೂಪಿಸಬೇಕು. ಸಹಕಾರ ಕ್ಷೇತ್ರಗಳಲ್ಲಿ ಪರಿಶಿಷ್ಟರು ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು. ಆಸಕ್ತರನ್ನು ನೋಂದಣಿ ಮಾಡಿಸಬೇಕು ಎಂದು ಸೂಚಿಸಿದರು.
ನಿಗದಿತ ಅವಧಿಯಲ್ಲಿ ಹಣ ವ್ಯಯಿಸದೇ ಎಸ್‌ಸಿಎಸ್‌ಪಿ ಎಸ್‌ಟಿಪಿ ಕಾಯ್ದೆ ಆಶಯಗಳನ್ನು ಮರೆತು, ನಿಯಮಬಾಹಿರವಾಗಿ ವರ್ತಿಸಿದರೆ, ಅನುದಾನ ಬಳಕೆಗೆ ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು. ಖರ್ಚಾಗದ ಹಣವನ್ನು ಏಕ ಗವಾಕ್ಷಿ ಮೂಲಕ ಹಿಂಪಡೆದು, ಪರಿಶಿಷ್ಟ ಸಮುದಾಯಗಳ ಪೂರಕ ಯೋಜನೆಗೆ ನೀಡಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.