ADVERTISEMENT

₹50 ಕೋಟಿ: ಕ್ರಿಯಾಯೋಜನೆಗೆ ಅನುಮೋದನೆ

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2021, 20:52 IST
Last Updated 23 ಅಕ್ಟೋಬರ್ 2021, 20:52 IST
ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಆಯೋಜಿಸಿರುವ ಎರಡು ದಿನಗಳ ಚನ್ನಮ್ಮನ ಕಿತ್ತೂರು ಉತ್ಸವ–2021ಕ್ಕೆ ಶನಿವಾರ ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಹರಿಹರದ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ಸಚಿವರಾದ ಉಮೇಶ ಕತ್ತಿ, ಮುರುಗೇಶ ನಿರಾಣಿ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಸಂಸದರಾದ ಮಂಗಲಾ ಅಂಗಡಿ,‌ ಈರಣ್ಣ ಕಡಾಡಿ ಹಾಗೂ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಅನಿಲ ಬೆನಕೆ, ಮಹಾದೇವಪ್ಪ ಯಾದವಾಡ, ಮಹೇಶ ಕುಮಠಳ್ಳಿ, ಮಹಾಂತೇಶ ದೊಡ್ಡಗೌಡರ ಭಾಗವಹಿಸಿದ್ದರು

ಹುಬ್ಬಳ್ಳಿ: ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ₹50 ಕೋಟಿ ವೆಚ್ಚದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗುವುದು‌ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಕಿತ್ತೂರು ಚನ್ನಮ್ಮ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತ ನಾಡಿದ ಅವರು, 2011ರಲ್ಲಿ ₹8 ಕೋಟಿ ಬಿಡುಗಡೆ ಮಾಡಿ, ಆರಂಭಿ ಸಲಾಗಿತ್ತು. ಕಿತ್ತೂರು ರಾಣಿ ಚನ್ನಮ್ಮ ಬೆಳಗಾವಿಗೆ ಮಾತ್ರ ಸೀಮಿತವಾಗಿರದೆ ಇಡೀ ರಾಜ್ಯಕ್ಕೆ ಸೇರಿದವರಾಗಿದ್ದಾರೆ‌‌ ಎಂದರು.

ಕಿತ್ತೂರು ರಾಣಿ ಚನ್ನಮ್ಮ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಒಬ್ಬರು. ಬ್ರಿಟಿಷರ ವಿರುದ್ಧ ರಣಕಹಳೆ ಊದಿದ ಕರ್ನಾಟಕದ ಹೆಮ್ಮೆಯ ಮಹಿಳೆ.‌ ಕಿತ್ತೂರು ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಕೊಡುಗೆ ಯನ್ನು ಸ್ಮರಿಸಿ, ಅವರ ಆಶೋತ್ತರ
ಗಳನ್ನು ಈಡೇರಿಸುವ ಕೆಲಸವನ್ನು ಸರ್ಕಾರ ಮಾಡಲಿದೆ‌ ಎಂದು ಹೇಳಿದರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.