ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದದ ಅಂತರಘಟಕ ವರ್ಗಾವಣೆ ಪ್ರಕ್ರಿಯೆಯಲ್ಲಿ ಶುಕ್ರವಾರದಿಂದ ನಿತ್ಯ 500 ಶಿಕ್ಷಕರಿಗೆ ವರ್ಗಾವಣೆ ಕೌನ್ಸೆಲಿಂಗ್ ನಡೆಸಲು ನಿರ್ಧರಿಸಲಾಗಿದೆ.
ಈ ಬಗ್ಗೆ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಇದೇ 26 ರವರೆಗಿನ ವೇಳಾಪಟ್ಟಿ ಬಿಡುಗಡೆ ಗೊಳಿಸಿದ್ದಾರೆ. ಆ ವೇಳೆಗೆ 9,500 ಶಿಕ್ಷಕರ ವರ್ಗಾವಣೆ ಪೂರ್ಣಗೊಳ್ಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.