ADVERTISEMENT

ಧರ್ಮಸ್ಥಳ: 50ನೇ ವರ್ಷದ ಸಾಮೂಹಿಕ ವಿವಾಹ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2022, 17:54 IST
Last Updated 27 ಏಪ್ರಿಲ್ 2022, 17:54 IST
ಧರ್ಮಸ್ಥಳದಲ್ಲಿ ಬುಧವಾರ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 183 ಜೋಡಿ ವಧು- ವರರು ದಾಂಪತ್ಯ ಜೀವನಕ್ಕೆ ಅಡಿ ಇಟ್ಟರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಕಂದಾಯ ಸಚಿವ ಆರ್. ಅಶೋಕ್, ಚಿತ್ರ ನಟ ಗಣೇಶ್ ಮತ್ತು ಗಣ್ಯರು ಮಂಗಳಸೂತ್ರ ನೀಡಿ ನೂತನ ವಧು–ವರರಿಗೆ ಶುಭ ಹಾರೈಸಿದರು.

ಉಜಿರೆ: ಧರ್ಮಸ್ಥಳದ ಅಮೃತವರ್ಷಿಣಿ ಸಭಾ ಭವನದಲ್ಲಿ ಬುಧವಾರ ಸಂಜೆ 6.30ರ ಗೋಧೂಳಿ ಲಗ್ನದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹಗಳು ನಡೆದವು.

ಗಣ್ಯರು ಮತ್ತು ಹಿರಿಯರ ಸಮ್ಮುಖದಲ್ಲಿ 183 ಜತೆ ನವ ವಧು- ವರರು ದಾಂಪತ್ಯ ಜೀವನಕ್ಕೆ ಅಡಿ ಇಟ್ಟರು. ಬೆಳಿಗ್ಗೆ ಹೆಗ್ಗಡೆ ಅವರ ನಿವಾಸದಲ್ಲಿ ವಧುವಿಗೆ ಸೀರೆ ಮತ್ತು ರವಕೆ ಹಾಗೂ ವರನಿಗೆ ಧೋತಿ, ಶಾಲು ವಿತರಿಸಲಾಯಿತು. ಸಂಜೆ 5 ಗಂಟೆಗೆ ಭವ್ಯ ಮೆರವಣಿಗೆಯಲ್ಲಿ ವಧು-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು, ಅಮೃತವರ್ಷಿಣಿ ಸಭಾಭವನದಲ್ಲಿ ಮದುವೆ ಮಂಟಪಕ್ಕೆ ಪ್ರವೇಶಿಸಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಕಂದಾಯ ಸಚಿವ ಆರ್. ಅಶೋಕ, ಚಿತ್ರ ನಟ ಗಣೇಶ್ ಮತ್ತು ಗಣ್ಯರು ಮಂಗಳಸೂತ್ರ ನೀಡಿ, ನೂತನ ವಧು– ವರರಿಗೆ ಶುಭ ಹಾರೈಸಿದರು.

ADVERTISEMENT

ಜಾತಿ- ಮತ, ಅಂತಸ್ತಿನ ಭೇದ ಮರೆತು 60 ಜೋಡಿ ಅಂತರ್‌ ಜಾತೀಯ ವಿವಾಹ ನಡೆದಿರುವ ಬಗ್ಗೆ ಹೆಗ್ಗಡೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ‘ಧರ್ಮಸ್ಥಳ ಕ್ಷೇತ್ರದಲ್ಲಿ ಮದುವೆಯಾದವರು ಪರಸ್ಪರ ಅರಿತುಕೊಂಡು ಶಾಂತಿ- ಸಹನೆ ಮತ್ತು ಪ್ರೀತಿ- ವಿಶ್ವಾಸದಿಂದ ನೆಮ್ಮದಿಯ ಜೀವನ ನಡೆಸಬೇಕು. ಮದುವೆಯ ಪಾವಿತ್ರ್ಯವನ್ನು ಅರ್ಥ ಮಾಡಿಕೊಂಡು ಸಾರ್ಥಕ ಜೀವನ ನಡೆಸಿ’ ಎಂದು ಹಾರೈಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.