ಹುಬ್ಬಳ್ಳಿ: ನೀತಿ ಆಯೋಗದ ಶಿಫಾರಸಿನಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗವನ್ನು ಜಾರಿಗೆ ತರದಂತೆ ಒತ್ತಾಯಿಸಿ ಭಾರತೀಯ ವೈದ್ಯಕೀಯ ಸಂಘ ಹುಬ್ಬಳ್ಳಿ ಘಟಕ ವತಿಯಿಂದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ಜ.2 ರಂದು ದೇಶದಾದ್ಯಂತ ಕರಾಳ ದಿನ ಆಚರಿಸಲು ಕರೆ ನೀಡಿದ್ದು, ಹುಬ್ಬಳ್ಳಿಯಲ್ಲಿ ಎಲ್ಲ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡಿ ಶಾಂತಿಯುತವಾಗಿ ಹೋರಾಟ ಮಾಡಲಾಗುವುದು. ತುರ್ತು ಸೇವೆ ವಿಭಾಗ ಎಂದಿನಂತೆ ಕಾರ್ಯ ನಿರ್ವಹಿಸಲಿದೆ ಎಂದು ಐಎಂಎ ಹುಬ್ಬಳ್ಳಿ ಘಟಕ ಅಧ್ಯಕ್ಷ ಡಾ.ಜಿ.ಬಿ.ಸತ್ತೂರ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.