ADVERTISEMENT

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಂಪ್ಯೂಟರ್ ಆಪರೇಟರ್‌ಗಳ ಗೌರವ ಧನ ಹೆಚ್ಚಳ: ಸಚಿವೆ ಉಮಾಶ್ರೀ

​ಪ್ರಜಾವಾಣಿ ವಾರ್ತೆ
Published 1 ಜನವರಿ 2018, 10:47 IST
Last Updated 1 ಜನವರಿ 2018, 10:47 IST
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಂಪ್ಯೂಟರ್ ಆಪರೇಟರ್‌ಗಳ ಗೌರವ ಧನ ಹೆಚ್ಚಳ: ಸಚಿವೆ ಉಮಾಶ್ರೀ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಂಪ್ಯೂಟರ್ ಆಪರೇಟರ್‌ಗಳ ಗೌರವ ಧನ ಹೆಚ್ಚಳ: ಸಚಿವೆ ಉಮಾಶ್ರೀ   

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂಪ್ಯೂಟರ್ ಆಪರೇಟರ್, ಮೆಸೆಂಜರ್‌ಗಳ ಗೌರವಧನ ಹೆಚ್ಚಿಸಿರುವುದಾಗಿ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.

ಹೊಸ ವರ್ಷದ ಉಡುಗೊರೆಯಾಗಿ ಗೌರವ ಧನ ಹೆಚ್ಚಳ ಮಾಡಿರುವುದಾಗಿ ಪ್ರಕಟಣೆ ತಿಳಿಸಿದೆ.

ಕಂಪ್ಯೂಟರ್‌ ಆಪರೇಟರ್‌ಗಳ ಗೌರವ ಧನವನ್ನು ₹6 ಸಾವಿರದಿಂದ ₹11 ಸಾವಿರಕ್ಕೆ ಹಾಗೂ ಮೆಸೆಂಜರ್‌ಗಳ ಗೌರವ ಧನವನ್ನು ₹4 ಸಾವಿರದಿಂದ ₹8 ಸಾವಿರಕ್ಕೆ ಹೆಚ್ಚಿಸಲಾಗಿದೆ.

ADVERTISEMENT

ಕೌಟುಂಬಿಕ ಹಿಂಸೆಯಿಂದ ಮಹಿಳಾ ಸಂರಕ್ಷಣಾ ಕಾಯ್ದೆ ನಿಯಮ–2005ರ ಅಡಿಯಲ್ಲಿ ಬಾಹ್ಯ ಮೂಲದಿಂದ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಇದು ಅನ್ವಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.