ಮಂಗಳೂರು: ಮೂಡುಬಿದಿರೆ ಒಂಟಿಕಟ್ಟೆಯ ಸಂಜೀವ ಶೆಟ್ಟಿ ಸ್ಮಾರಕ ಸಭಾಂಗಣದಲ್ಲಿ ಮಂಗಳವಾರದಿಂದ ನಾಲ್ಕು ದಿನಗಳ ಕಾಲ ಸಿಪಿಎಂ 22ನೇ ರಾಜ್ಯ ಸಮ್ಮೇಳನ ನಡೆಯಲಿದೆ. ಶುಕ್ರವಾರ ಸಮ್ಮೇಳನ ಸಮಾರೋಪಗೊಳ್ಳಲಿದ್ದು, ಅದೇ ದಿನ ಪಕ್ಷದ ರಾಜ್ಯ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗುತ್ತದೆ.
ಮಂಗಳವಾರ ಬೆಳಿಗ್ಗೆ 10.30ಕ್ಕೆ ಅಲಂಗಾರ್‌ನಿಂದ ಹೊರಡುವ ಸಿಪಿಎಂ ಕಾರ್ಯಕರ್ತರು, ವಿವಿಧ ಮುಂಚೂಣಿ ಸಂಘಟನೆಗಳ ಸದಸ್ಯರ ಬೃಹತ್ ಮೆರವಣಿಗೆ ಸ್ವರಾಜ್ ಮೈದಾನ ತಲುಪಲಿದೆ. ಅಲ್ಲಿ ನಡೆಯುವ ಬಹಿರಂಗ ಸಭೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಪ್ರಧಾನ ಭಾಷಣ ಮಾಡುವರು. ಪಕ್ಷದ ಪಾಲಿಟ್ ಬ್ಯೂರೊ ಸದಸ್ಯ ಎಂ.ಎ.ಬೇಬಿ, ರಾಜ್ಯ ಮಂಡಳಿ ಕಾರ್ಯದರ್ಶಿ ಜಿ.ವಿ.ಶ್ರೀರಾಮ ರೆಡ್ಡಿ ಸೇರಿದಂತೆ ಹಲವು ನಾಯಕರು ಭಾಗವಹಿಸುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.