ಹುಬ್ಬಳ್ಳಿ: ಕೇಂದ್ರ ಸರ್ಕಾರ ಮಂಡಿಸಿರುವ 'ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕ-2017' ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘಟನೆ ನೀಡಿರುವ 12 ಗಂಟೆ ಕಾಲ ಹೊರರೋಗಿ ಸೇವೆ ಬಂದ್ ಕರೆಗೆ ಹುಬ್ಬಳ್ಳಿಯಲ್ಲಿ ಉತ್ತಮ ಸ್ಪಂದನೆ ಸಿಕ್ಕಿದೆ.
ಕರಾಳ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗಳು ಬಂದ್ ಆಗಿವೆ. ನಗರದ ಪ್ರತಿಷ್ಠಿತ ಆಸ್ಪತ್ರೆಗಳಾದ ವಿವೇಕಾನಂದ ನರ್ಸಿಂಗ್ ಹೋಂ, ತತ್ವದರ್ಶ, ಶಕುಂತಲಾ, ಶಿವಕೃಪಾ, ಲೈಫ್ ಲೈನ್, ಸುಚಿರಾಯು ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗ ಸಂಪೂರ್ಣ ಬಂದ್ ಆಗಿದ್ದು, ಸಂಜೆ 6 ಗಂಟೆ ನಂತರ ಅವುಗಳು ಪುನಃ ಕಾರ್ಯಾರಂಭ ಮಾಡಲಿವೆ. ಇನ್ನು ಕೆಲ ಖಾಸಗಿ ಆಸ್ಪತ್ರೆಗಳ ಎದುರು ಸೂಚನಾ ಫಲಕವನ್ನ ಅಳವಡಿಸಲಾಗಿದ್ದು, ಹೊರ ರೋಗಿಗಳು ಸಹಕರಿಸುವಂತೆ ಮನವಿ ಮಾಡಿದ್ದಾರೆ.
ನಗರದ ಕಿಮ್ಸ್ ಆಸ್ಪತ್ರೆ ಮತ್ತು ಚಿಟಗುಪ್ಪಿ ಆಸ್ಪತ್ರೆಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.