ADVERTISEMENT

ಐಎಂಸಿ ವಿರೋಧಿಸಿ ಖಾಸಗಿ ಆಸ್ಪತ್ರೆ ಒಪಿಡಿ ಬಂದ್: ಚಿತ್ರದುರ್ಗದಲ್ಲಿ ವೈದ್ಯರ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 2 ಜನವರಿ 2018, 5:02 IST
Last Updated 2 ಜನವರಿ 2018, 5:02 IST
ಐಎಂಸಿ ವಿರೋಧಿಸಿ ಖಾಸಗಿ ಆಸ್ಪತ್ರೆ ಒಪಿಡಿ ಬಂದ್: ಚಿತ್ರದುರ್ಗದಲ್ಲಿ ವೈದ್ಯರ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ
ಐಎಂಸಿ ವಿರೋಧಿಸಿ ಖಾಸಗಿ ಆಸ್ಪತ್ರೆ ಒಪಿಡಿ ಬಂದ್: ಚಿತ್ರದುರ್ಗದಲ್ಲಿ ವೈದ್ಯರ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ   

ಚಿತ್ರದುರ್ಗ: ರಾಷ್ಟ್ರೀಯ ವೈದ್ಯಕೀಯ ಆಯೋಗದ ಸ್ಥಾಪನೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿರುವ ಮುಷ್ಕರಕ್ಕೆ ಚಿತ್ರದುರ್ಗದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಖಾಸಗಿ  ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗಗಳು ಕಾರ್ಯನಿರ್ವಹಿಸುತ್ತಿಲ್ಲ. ಜಿಲ್ಲಾ ಐಎಂಎ ನಿರ್ಧಾರದಂತೆ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮಾತ್ರ ಹೊರ ರೋಗಿಗಳ ವಿಭಾಗವನ್ನು ತೆರೆದಿದೆ. ಉಳಿದಂತೆ ಎಲ್ಲ ಖಾಸಗಿ ನರ್ಸಿಂಗ್ ಹೋಂ, ಆಸ್ಪತ್ರೆಗಳು ಬೆಳಿಗ್ಗೆ 6ರಿಂದಲೂ ಬಂದ್ ಆಗಿವೆ. ಸಂಜೆ 6ರವರೆಗೂ ಬಂದ್ ಮುಂದುವರಿಯಲಿದೆ.

ಬರುವ ಎಲ್ಲ ರೋಗಿಗಳಿಗೂ ಚಿಕಿತ್ಸೆ ನೀಡುವಂತೆ, ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವಂತೆ ಸರ್ಕಾರಿ  ಆಸ್ಪತ್ರೆಗಳ ವೈದ್ಯರಿಗೆ ಸೂಚಿಸಲಾಗಿದೆ. ಔಷಧಿಗಳ ಕೊರತೆ ಇಲ್ಲ ಎಂದು ಡಿಎಚ್ಒ ಬಿ.ವಿ.ನೀರಜ್  ತಿಳಿಸಿದ್ದಾರೆ.

ADVERTISEMENT

ಸರ್ಕಾರ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಸಂಖ್ಯೆ ಈಗಾಗಲೇ ಏರಿಕೆಯಾಗುತ್ತಿದ್ದು, ಸಂಜೆ ಹೊತ್ತಿಗೆ ಕನಿಷ್ಠ ಶೇ 30 ರಿಂದ 40 ರಷ್ಟು ಹೆಚ್ಚಾಗಬಹುದೆಂದು ಜಿಲ್ಲಾ ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.