ಮಂಗಳೂರು: ಬಿಜೆಪಿ ಕಾರ್ಯಕರ್ತ ದೀಪಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ನಾಲ್ವರು ಯುವಕರನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುರತ್ಕಲ್ ಬಳಿಯಿಂದ ಕಾರನ್ನು ಬೆನ್ನಟ್ಟಿದ್ದ ಪೊಲೀಸರು ಮಂಗಳೂರು- ಮೂಡುಬಿದಿರೆ ಹೆದ್ದಾರಿಯಲ್ಲಿರುವ ಮಿಜಾರು ಬಳಿ ಗುಂಡು ಹಾರಿಸಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಧ್ಯಾಹ್ನ 1.30ಕ್ಕೆ ಕೊಲೆ ನಡೆದಿತ್ತು. ಕೆಲವೇ ಸಮಯದಲ್ಲಿ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಅವರೇ ಕೊಲೆಯಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ಬಗ್ಗೆ ವಿಚಾರಣೆ ನಡೆಯುತ್ತಿದೆ' ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.