ADVERTISEMENT

ಸರ್ಕಾರದಿಂದ ₹10 ಲಕ್ಷ ಪರಿಹಾರ: ಫಲ ನೀಡಿದ ಡಿಸಿ ಮನವೊಲಿಕೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2018, 7:01 IST
Last Updated 4 ಜನವರಿ 2018, 7:01 IST
ಸರ್ಕಾರದಿಂದ ₹10 ಲಕ್ಷ ಪರಿಹಾರ: ಫಲ ನೀಡಿದ ಡಿಸಿ ಮನವೊಲಿಕೆ
ಸರ್ಕಾರದಿಂದ ₹10 ಲಕ್ಷ ಪರಿಹಾರ: ಫಲ ನೀಡಿದ ಡಿಸಿ ಮನವೊಲಿಕೆ   

ಮಂಗಳೂರು: ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಜನರ‌ ಮನವೊಲಿಕೆಗೆ ಯತ್ನಿಸಿದರು.

ಸರ್ಕಾರ ಈಗಾಗಲೇ ₹5ಲಕ್ಷ ಮಂಜೂರು ಮಾಡಿದೆ. ಮುಖ್ಯಮಂತ್ರಿಗಳ ವಿಶೇಷ ಪರಿಹಾರ ನಿಧಿಯಿಂದ ₹5ಲಕ್ಷ ನೀಡಲು‌ ಒಪ್ಪಿಗೆ ಸೂಚಿಸಲಾಗಿದೆ. ಇಂದೇ ₹10 ಲಕ್ಷ ವಿತರಿಸಲಾಗುವುದು. ದಯವಿಟ್ಟು ಶಾಂತಿ‌ ಕಾಪಾಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸತ್ಯಜಿತ್ ಸುರತ್ಕಲ್, ಸರ್ಕಾರ ₹25 ಲಕ್ಷ ಪರಿಹಾರ ನೀಡಬೇಕು. ಒಂದು ವೇಳೆ ಪರಿಹಾರ ಸಿಗದೇ ಇದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಮಾಡಲಾಗುವುದು ಎಂದು ಎಚ್ಚರಿಸಿದರು.

ADVERTISEMENT

ಆದರೆ, ಜನರು ಮಾತ್ರ ಇದಕ್ಕೆ ಒಪ್ಪದೆ, ₹25ಲಕ್ಷ ಪರಿಹಾರವನ್ನು ಈಗಲೇ ಕೊಡಬೇಕು ಎಂದು ಆಗ್ರಹಿಸಿದರು.

ವಿಶ್ವ ಹಿಂದೂ ಪರಿಷತ್‌ನ ಗೋಪಾಲ್ ಮಾತನಾಡಿ, ನಾವು ಹಣಕ್ಕಾಗಿ ಹೋರಾಟ ಮಾಡುತ್ತಿಲ್ಲ. ಈಗಾಗಲೇ ಜಿಲ್ಲಾಧಿಕಾರಿ ₹10 ಲಕ್ಷ ನೀಡಿದ್ದಾರೆ. ಇಲ್ಲಿಗೆ ಮುಗಿಸೋಣ. ಅವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಒದಗಿಸಲು ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾಧಿಕಾರಿಗೆ ಗೌರವ ಕೊಟ್ಟು, ಅಂತಿಮ ಯಾತ್ರೆ ನಡೆಸೋಣ. ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ಹೇಳಿದರು.

ನಂತರ ಆಂಬುಲೆನ್ಸ್ ನಿಂದ ಶವವನ್ನು ಕೆಳಕ್ಕೆ ಇಳಿಸಿ, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಕೆಲವೇ ಗಂಟೆಗಳಲ್ಲಿ ಮೆರವಣಿಗೆ ಮೂಲಕ ಅಂತ್ಯಕ್ರಿಯೆ ನಡೆಸುವುದಾಗಿ ಕುಟುಂಬದವರು ತಿಳಿಸಿದ್ದಾರೆ.

ಗಣೇಶ್ ಕಟ್ಟೆಯ ಹಿಂದೂ ಸ್ಮಶಾನದವರೆಗೆ ಶವಯಾತ್ರೆ ನಡೆಯಲಿದ್ದು, ಇದಕ್ಕೆ ಪೊಲೀಸ್ ಇಲಾಖೆ ಅನುಮತಿ ನೀಡಿದೆ.

ಕ್ಷತ್ರಿಯ‌ಸಮಾಜದ ವಿಧಿವಿಧಾನಗಳೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.