ADVERTISEMENT

ಸ್ಧತಂತ್ರ ಧರ್ಮ: ಸಮಿತಿ ಸಭೆ 6ರಂದು

​ಪ್ರಜಾವಾಣಿ ವಾರ್ತೆ
Published 4 ಜನವರಿ 2018, 19:30 IST
Last Updated 4 ಜನವರಿ 2018, 19:30 IST

ಬೆಂಗಳೂರು: ವೀರಶೈವ ಲಿಂಗಾಯತ ಸ್ವತಂತ್ರ ಧರ್ಮದ ಬೇಡಿಕೆ ಕುರಿತು ಅಧ್ಯಯನ ನಡೆಸಲು ರಾಜ್ಯ ಸರ್ಕಾರ ರಚಿಸಿರುವ ತಜ್ಞರ ಸಮಿತಿಯ ಮೊದಲ ಸಭೆ ಇದೇ 6 ರಂದು ವಿಕಾಸಸೌಧದಲ್ಲಿ ನಡೆಯಲಿದೆ.

ಹೈಕೋರ್ಟ್‌ ನಿವೃತ್ತ ನ್ಯಾಯಮುರ್ತಿ ಎಚ್‌.ಎನ್‌. ನಾಗಮೋಹನದಾಸ್‌ ಅಧ್ಯಕ್ಷತೆಯಲ್ಲಿ ಏಳು ಸದಸ್ಯರನ್ನು ಒಳಗೊಂಡ ಸಮಿತಿಯನ್ನು ರಚಿಸಿ ರಾಜ್ಯ ಅಲ್ಪಸಂಖ್ಯಾತ ಆಯೋಗ ಇತ್ತೀಚೆಗೆ ಆದೇಶ ಹೊರಡಿಸಿತ್ತು.

ಸಮಿತಿ ರಚಿಸಿದ ಸರ್ಕಾರದ ನಡೆಗೆ ಪಂಚ ಪೀಠಗಳ ಮಠಾಧೀಶರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಲಿಂಗಾಯತ ಸ್ವತಂತ್ರ ಧರ್ಮ ವೇದಿಕೆ ಮತ್ತು ರಾಷ್ಟ್ರೀಯ ಬಸವ ಸೇನೆ ಸ್ವಾಗತಿಸಿತ್ತು.

ADVERTISEMENT

ವೀರಶೈವ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ನೀಡುವ ಕುರಿತಂತೆ ಅಖಿಲ ಭಾರತ ವೀರಶೈವ ಮಹಾಸಭಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.