ಹೈದರಾಬಾದ್: ‘ಮಹದಾಯಿ ವಿಷಯದಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ ಪರ‍್ರೀಕರ್ ಜನರನ್ನು ವಂಚಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಕರ್ನಾಟಕದ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಆರೋಪಿಸಿದ್ದಾರೆ.
‘ಮಹದಾಯಿ ನದಿಯಿಂದ ಕರ್ನಾಟಕ 7.56 ಟಿಎಂಸಿ ನೀರನ್ನು ಕೇಳುತ್ತಿದೆ. ಈ ವಿಷಯದಲ್ಲಿ ನಾವು ಸ್ಪಷ್ಟ ನಿಲುವು ಹೊಂದಿದ್ದೇವೆ. ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ’ ಎಂದು ಎಂದು ಗುರುವಾರ ಇಲ್ಲಿ ತಿಳಿಸಿದ್ದಾರೆ.
‘ಪರ‍್ರೀಕರ್ ದ್ವಂದ್ವ ನಿಲುವು ಹೊಂದಿದ್ದಾರೆ. ಕರ್ನಾಟಕಕ್ಕೆ ನೀರು ನೀಡುವುದಿಲ್ಲ ಎಂದು ಹೇಳಿದ್ದರು. ಬಳಿಕ, ರಾಜಕೀಯ ನಿಲುವು ಕೈಗೊಳ್ಳುವ ಮೂಲಕ ಜನರನ್ನು ವಂಚಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.