ಹೊಸಪೇಟೆ: ಕೇಂದ್ರ ಕೌಶಲ ಅಭಿವೃದ್ಧಿ ಸಚಿವ ಅನಂತಕುಮಾರ್ ಹೆಗಡೆ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವುದನ್ನು ವಿರೋಧಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹೊಸಪೇಟೆ ಬಂದ್‍ಗೆ ಕರೆ ನೀಡಿದೆ.
ಬಂದ್‍ನಿಂದಾಗಿ ಶುಕ್ರವಾರ ಇಲ್ಲಿ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದೆ. ಶಾಲಾ ಕಾಲೇಜುಗಳು ಮುಚ್ಚಿವೆ.
ನಗರದ ಹೊರಭಾಗದಿಂದ ಸಾರಿಗೆ ಸಂಸ್ಥೆಯ ಬಸ್ಸುಗಳು ಸಂಚರಿಸುತ್ತಿದ್ದು, ಪ್ರಯಾಣಿಕರು ಪರದಾಡುತ್ತಿರುವ ದೃಶ್ಯ ಕಂಡುಬಂತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.