ಚಿಕ್ಕಮಗಳೂರು: ಕರ್ತವ್ಯ ಲೋಪದ ಆರೋಪದ ಮೇರೆಗೆ ಚಿಕ್ಕಮಗಳೂರು ಡಿಡಿಪಿಐ ಎನ್.ಜಿ.ಬಸವರಾಜು ಅವರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಟಿ.ಡಿ.ನಾಗೇಂದ್ರ ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ತರೀಕೆರೆ ತಾಲ್ಲೂಕಿನ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ (ಬಿಆರ್‌ಸಿ) ವಿಜಯಕುಮಾರ್ ಅವರಿಗೆ ಚಿಕ್ಕಮಗಳೂರು, ತರೀಕೆರೆ ತಾಲ್ಲೂಕುಗಳ ಹೆಚ್ಚುವರಿ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹೊಣೆ ವಹಿಸಿ ಆದೇಶ ನೀಡಲಾಗಿದೆ. ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.