ADVERTISEMENT

‘ಟಿಕೆಟ್‌ ನೀಡದ ಪಕ್ಷಕ್ಕೆ ಕುರುಬರ ಮತ ಇಲ್ಲ’

​ಪ್ರಜಾವಾಣಿ ವಾರ್ತೆ
Published 7 ಜನವರಿ 2018, 19:30 IST
Last Updated 7 ಜನವರಿ 2018, 19:30 IST

ಕಲಬುರ್ಗಿ: ’ಹೈದರಾಬಾದ್‌ ಕರ್ನಾಟಕ ಭಾಗದ ಒಂದು ವಿಧಾನಸಭಾ ಕ್ಷೇತ್ರದಲ್ಲಿಯಾದರೂ ಕುರುಬ ಸಮುದಾಯದ ಅಭ್ಯರ್ಥಿಗೆ ಟಿಕೆಟ್‌ ನೀಡದ ಪಕ್ಷಕ್ಕೆ ಕುರುಬ ಸಮಾಜದವರು ಮತ ನೀಡುವುದಿಲ್ಲ’ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ರಾಜೇಂದ್ರ ವೈ.ಸಣ್ಣಕ್ಕಿ ಹೇಳಿದರು.

ಇಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕುರುಬ, ಗೊಂಡ, ಕಾಡುಕುರುಬರ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ‘ಕುರುಬ ಸಮಾಜಕ್ಕೆ ಎಲ್ಲ ಪಕ್ಷಗಳು ರಾಜಕೀಯ ಪ್ರಾತಿನಿಧ್ಯ ನೀಡಿಲ್ಲ. ಮತಕ್ಕಾಗಿ ಬಳಸಿಕೊಂಡು ನಿರ್ಲಕ್ಷ್ಯ ಮಾಡುತ್ತಿವೆ. ಹೀಗಾಗಿ ಕುರುಬರ ಸಂಖ್ಯೆ ಹೆಚ್ಚಾಗಿರುವ ಕ್ಷೇತ್ರಗಳಲ್ಲಿ ಟಿಕೆಟ್‌ ನೀಡಬೇಕು. ಇಲ್ಲದಿದ್ದರೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು’ ಎಂದರು.

‘ಕೇಂದ್ರ ಸರ್ಕಾರ ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು. ಕಲಬುರ್ಗಿ, ಬೀದರ್‌ ಹಾಗೂ ಯಾದಗಿರಿ ಜಿಲ್ಲೆಗಳ ಸಮುದಾಯದ ಜನರಿಗೆ ಎಸ್‌.ಟಿ ಪ್ರಮಾಣಪತ್ರ ವಿತರಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.