ADVERTISEMENT

ನಾಡಗೀತೆ ಧಾಟಿ ನಿಗದಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 7 ಜನವರಿ 2018, 19:30 IST
Last Updated 7 ಜನವರಿ 2018, 19:30 IST

ಶಿರಸಿ: ನಾಡಗೀತೆಗೆ ನಿರ್ದಿಷ್ಟ ಧಾಟಿಯನ್ನು ತಕ್ಷಣವೇ ನಿಗದಿ ಮಾಡಬೇಕು ಎಂದು ಭಾನುವಾರ ಇಲ್ಲಿ ಮುಕ್ತಾಯಗೊಂಡ ರಾಜ್ಯಮಟ್ಟದ ಸುಗಮ ಸಂಗೀತ ಸಮ್ಮೇಳನ ಒತ್ತಾಯಿಸಿದೆ. ಇಲ್ಲದಿದ್ದಲ್ಲಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿಯೂ ಎಚ್ಚರಿಸಿದೆ.

ಕರ್ನಾಟಕ ಸುಗಮ ಸಂಗೀತ ಪರಿಷತ್ತಿಗೆ ಬೆಂಗಳೂರಿನಲ್ಲಿ ಶಾಶ್ವತ ನಿವೇಶನ ನೀಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಸುಗಮ ಸಂಗೀತಕ್ಕೆ ಪ್ರತ್ಯೇಕ ಅಕಾಡೆಮಿ ಸ್ಥಾಪನೆ ಮಾಡಬೇಕು. ಈ ಕಾರ್ಯ ಇದೇ ವರ್ಷ ಆಗಬೇಕು. ಸುಗಮ ಸಂಗೀತವನ್ನು ಪಠ್ಯಕ್ರಮದಲ್ಲಿ ಸೇರಿಸಬೇಕು ಎಂದೂ ಸಮ್ಮೇಳನ ಆಗ್ರಹಿಸಿದೆ.

ಸಮಾರೋಪ ಕಾರ್ಯಕ್ರಮದಲ್ಲಿ ಪರಿಷತ್ ಗೌರವಾಧ್ಯಕ್ಷ ವೈ.ಕೆ. ಮುದ್ದುಕೃಷ್ಣ ನಿರ್ಣಯ ಮಂಡಿಸಿದರು.
ಸಮ್ಮೇಳನದ ಅಧ್ಯಕ್ಷೆ ಎಂ.ಕೆ. ಜಯಶ್ರೀ, ಸಾಹಿತಿ ಸಿದ್ಧಲಿಂಗ ಪಟ್ಟಣಶೆಟ್ಟಿ, ಕವಿ ಸುಬ್ರಾಯ ಚೊಕ್ಕಾಡಿ, ಸುಗಮ ಸಂಗೀತ ಪರಿಷತ್‌ ಅಧ್ಯಕ್ಷ ಕಿಕ್ಕೇರಿ ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ನಗರ ಶ್ರೀನಿವಾಸ ಉಡುಪ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.