ADVERTISEMENT

ತಜ್ಞರ ಸಮಿತಿಯಿಂದ ಕಾಲಾವಕಾಶ ಕೋರಿಕೆ: ವಿನಯ ಕುಲಕರ್ಣಿ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 7 ಜನವರಿ 2018, 19:30 IST
Last Updated 7 ಜನವರಿ 2018, 19:30 IST

ಧಾರವಾಡ: ವೀರಶೈವ- ಲಿಂಗಾಯತ ಸ್ವತಂತ್ರ ಧರ್ಮ ಬೇಡಿಕೆ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ನಿಗದಿಪಡಿಸಿರುವ ಕಾಲಾವಕಾಶವನ್ನು ವಿಸ್ತರಿಸುವಂತೆ ಕೋರುವುದಾಗಿ ತಜ್ಞರ ಸಮಿತಿ ಹೇಳಿರುವುದಕ್ಕೆ, ಸಚಿವ ವಿನಯ ಕುಲಕರ್ಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಲಿಂಗಾಯತ ಸಮುದಾಯ ತೊಂದರೆಯಲ್ಲಿ ಇರುವುದರಿಂದ ನಾವು ಹೋರಾಟ ಮಾಡುತ್ತಿದ್ದೇವೆ. ಸಮಿತಿ ಒಂದು ತಿಂಗಳಲ್ಲಿ ವರದಿ ಸಲ್ಲಿಸಬೇಕಿತ್ತು. ಇದೀಗ ಆರು ತಿಂಗಳು ಕಾಲಾವಕಾಶ ಕೇಳಲು ಮುಂದಾಗಿರುವುದು ನಮಗೆ ಅಸಮಾಧಾನ ತಂದಿದೆ. ಈ ಕುರಿತು ನಾಳೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಾತನಾಡುತ್ತೇನೆ’ ಎಂದು ಅವರು ಭಾನುವಾರ ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

‘ಈ ಹೋರಾಟ ಕೇವಲ ಚುನಾವಣೆಗೆ ಸೀಮಿತ ಎಂದು ಹೇಳಿರುವ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ ಅವರು ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಯ ಪರವಾಗಿಲ್ಲ. ಹೀಗಾಗಿ ಏನೇನೋ ಹೇಳಿಕೆ ನೀಡುತ್ತಿದ್ದಾರೆ. ನಮ್ಮ ಹೋರಾಟ ನಿರಂತರವಾದದು. ಮಲ್ಲಿಕಾರ್ಜುನ ಅವರಿಗೆ ಇದೆಲ್ಲ ತಿಳಿದಿಲ್ಲ’ ಎಂದು ಹೇಳಿದರು.

ADVERTISEMENT

***

ಅಖಿಲ ಭಾರತ ವೀರಶೈವ ಮಹಾಸಭಾ ಹೆಸರಿನಲ್ಲಿ ಲಿಂಗಾಯತ ಪದ ಸೇರಿಸುವ ಬದಲು, ವೀರಶೈವ ಪದವನ್ನೇ ತೆಗೆದು ಅಖಿಲ ಭಾರತ ಲಿಂಗಾಯತ ಮಹಾಸಭಾ ಎಂದು ಬದಲಾಯಿಸಿದರೆ ಒಳ್ಳೆಯದು
ಬಸವಜಯ ಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಪೀಠ, ಕೂಡಲಸಂಗಮ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.