ADVERTISEMENT

ಉನ್ನತ ಶಿಕ್ಷಣದಲ್ಲಿ ಹೆಣ್ಣು ಮಕ್ಕಳೇ ಹೆಚ್ಚು

​ಪ್ರಜಾವಾಣಿ ವಾರ್ತೆ
Published 7 ಜನವರಿ 2018, 19:30 IST
Last Updated 7 ಜನವರಿ 2018, 19:30 IST
ಉನ್ನತ ಶಿಕ್ಷಣದಲ್ಲಿ ಹೆಣ್ಣು ಮಕ್ಕಳೇ ಹೆಚ್ಚು
ಉನ್ನತ ಶಿಕ್ಷಣದಲ್ಲಿ ಹೆಣ್ಣು ಮಕ್ಕಳೇ ಹೆಚ್ಚು   

ಬೆಂಗಳೂರು: ಉನ್ನತ ಶಿಕ್ಷಣ ಮಾಡಲು ಬಯಸುವ ಹೆಣ್ಣು ಮಕ್ಕಳ ಸಂಖ್ಯೆ ಕರ್ನಾಟಕದಲ್ಲಿ ದಿನೇ ದಿನೇ ಹೆಚ್ಚುತ್ತಿದೆ. ಹುಡುಗರಿಗಿಂತಲೂ ಹೆಚ್ಚಿನ ಸಂಖ್ಯೆಯ ಹುಡುಗಿಯರು ವಿವಿಧ ಕೋರ್ಸ್‌ಗಳಿಗೆ ಪ್ರವೇಶ ಪಡೆಯುತ್ತಿದ್ದಾರೆ.

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಬಿಡುಗಡೆಗೊಂಡಿರುವ ‘ಅಖಿಲ ಭಾರತ ಉನ್ನತ ಶಿಕ್ಷಣ ಸಮೀಕ್ಷೆ–2016–17’ರ ವರದಿ ಇದನ್ನು ಬಹಿರಂಗಪಡಿಸಿದೆ.

ಈ ವರದಿಯ ಪ್ರಕಾರ, ರಾಜ್ಯದ ಉನ್ನತ ಶಿಕ್ಷಣದಲ್ಲಿ ಲಿಂಗ ಸಮಾನತೆ ಸೂಚ್ಯಂಕ 100:101 ಇದೆ. ಅಂದರೆ, 100 ಗಂಡು ಮಕ್ಕಳು ಉನ್ನತ ಶಿಕ್ಷಣಕ್ಕ ಪ್ರವೇಶ ಪಡೆದರೆ, 101 ಹೆಣ್ಣು ಮಕ್ಕಳು ದಾಖಲಾಗಿದ್ದಾರೆ. ಕಳೆದ ವರ್ಷ ಈ ಸೂಚ್ಯಂಕ 100:99 ಇತ್ತು.

ADVERTISEMENT

ರಾಷ್ಟ್ರೀಯ ಮಟ್ಟದಲ್ಲಿ ಲಿಂಗ ಸಮಾನತೆ ಅನುಪಾತ 100:94ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.