ಹುಬ್ಬಳ್ಳಿ: ನಗರದಲ್ಲಿ ಬಂದ್ ಹಿನ್ನೆಲೆಯಲ್ಲಿ ಚನ್ನಮ್ಮ ವೃತ್ತದಲ್ಲಿ ದಲಿತ ಸಂಘಟನೆಗಳ ಮುಖಂಡರು ಟೈರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಕೋರೆಗಾಂವ್‌ನಲ್ಲಿ ದಲಿತರ ವಿರುದ್ಧ ನಡೆದ ದೌರ್ಜನ್ಯ, ವಿಜಯಪುರದಲ್ಲಿ ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಸಿದರು.
ಇತ್ತೀಚಿಗೆ ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.
ಇದೇ ವೇಳೆ ಪ್ರತಿಭಟನಕಾರರು ಹೊಸೂರು ವೃತ್ತದಲ್ಲಿ ರಸ್ತೆ ತಡೆ ನಡೆಸಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.