ADVERTISEMENT

ಮಂಗಳೂರು ಜೈಲಿನಲ್ಲಿ ಮಾರಾಮಾರಿ: ಮಧ್ಯ ಪ್ರವೇಶಿಸಿದ ಪೊಲೀಸರ ಮೇಲೆ ದಾಳಿ

​ಪ್ರಜಾವಾಣಿ ವಾರ್ತೆ
Published 8 ಜನವರಿ 2018, 14:12 IST
Last Updated 8 ಜನವರಿ 2018, 14:12 IST
ಗಾಯಾಳು ಪೊಲೀಸರನ್ನು ಕರೆದೊಯ್ಯುತ್ತಿರುವ ಸಹೋದ್ಯೋಗಿ
ಗಾಯಾಳು ಪೊಲೀಸರನ್ನು ಕರೆದೊಯ್ಯುತ್ತಿರುವ ಸಹೋದ್ಯೋಗಿ   

ಮಂಗಳೂರು: ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಎರಡು ಗುಂಪಿನ ನಡುವೆ ಮಾರಾಮಾರಿ‌ ನಡೆದಿದ್ದು, ಗಲಾಟೆ ನಿಯಂತ್ರಿಸಲು ಮುಂದಾದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ.

ಘಟನೆಯಲ್ಲಿ ಇಬ್ಬರು ಪೊಲೀಸರಿಗೆ ಪೆಟ್ಟು ಬಿದ್ದಿದ್ದು, ಒಬ್ಬರ ಕೈ ಮೂಳೆ ಮುರಿದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರಾಮಾರಿಯಲ್ಲಿ ಕೈದಿಗಳಿಗೂ ಗಾಯಗಳಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT