ADVERTISEMENT

ಅಕ್ರಮ ಭೂಮಂಜೂರಾತಿ ಆರೋಪ: ಬಿಜೆಪಿ ಶಾಸಕ ಆರ್. ಅಶೋಕ್ ವಿರುದ್ಧ ಎಫ್‌ಐಆರ್

​ಪ್ರಜಾವಾಣಿ ವಾರ್ತೆ
Published 9 ಜನವರಿ 2018, 6:52 IST
Last Updated 9 ಜನವರಿ 2018, 6:52 IST
ಆರ್. ಅಶೋಕ್ (ಸಂಗ್ರಹ ಚಿತ್ರ)
ಆರ್. ಅಶೋಕ್ (ಸಂಗ್ರಹ ಚಿತ್ರ)   

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ಅಕ್ರಮ ಭೂಮಂಜೂರಾತಿ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಆರ್. ಅಶೋಕ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಎಫ್ಐಆರ್ ದಾಖಲಿಸಿದೆ.

ಹಿಂದಿನ ತಹಶಿಲ್ದಾರ್ ರಾಮಚಂದ್ರ ಸೇರಿ ಐವರು ಅಧಿಕಾರಿಗಳನ್ನು ಬಂಧಿಸಲಾಗಿದೆ.

ಈ ಕುರಿತು ಭ್ರಷ್ಟಾಚಾರ ನಿಗ್ರಹ ದಳ ಪ್ರಕಟಣೆ ಹೊರಡಿಸಿದ್ದು, ಪ್ರಕಣದಲ್ಲಿ 1998ರಿಂದ 2006ರ ಅವಧಿಯಲ್ಲಿ ಬೆಂಗಳೂರು–ದಕ್ಷಿಣ ತಾಲ್ಲೂಕಿನ ಭೂ–ಸಕ್ರಮೀಕರಣ ಸಮಿತಿ ಅಧ್ಯಕ್ಷರು, ಉತ್ತರಹಳ್ಳಿ ಕ್ಷೇತ್ರದ ಅಂದಿನ ಶಾಸಕ ಆರ್. ಅಶೋಕ್, ಇತರ ಸರ್ಕಾರಿ ನೌಕರರು ಮತ್ತು ಅಕ್ರಮ ಫಲಾನುಭವಿಗಳು ಆರೋಪಿಗಳಾಗಿರುತ್ತಾರೆ ಎಂದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.