ADVERTISEMENT

ಕಲಬುರ್ಗಿ ಹತ್ಯೆ ಪ್ರಕರಣ: ರಾಜ್ಯ ಸರ್ಕಾರ, ಎನ್‌ಐಎಗೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 10 ಜನವರಿ 2018, 19:30 IST
Last Updated 10 ಜನವರಿ 2018, 19:30 IST
ಕಲಬುರ್ಗಿ ಹತ್ಯೆ ಪ್ರಕರಣ: ರಾಜ್ಯ ಸರ್ಕಾರ, ಎನ್‌ಐಎಗೆ ನೋಟಿಸ್‌
ಕಲಬುರ್ಗಿ ಹತ್ಯೆ ಪ್ರಕರಣ: ರಾಜ್ಯ ಸರ್ಕಾರ, ಎನ್‌ಐಎಗೆ ನೋಟಿಸ್‌   

ನವದೆಹಲಿ: ಸಂಶೋಧಕ ಡಾ.ಎಂ.ಎಂ. ಕಲಬುರ್ಗಿ ಅವರು ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ, ಕೇಂದ್ರ ಸರ್ಕಾರ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಹಾಗೂ ಕೇಂದ್ರ ತನಿಖಾ ಸಂಸ್ಥೆ (ಸಿಬಿಐ)ಗಳಿಗೆ ಸುಪ್ರೀಂ ಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ.

‘ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ವಿಶೇಷ ತನಿಖಾ ತಂಡಕ್ಕೆ ಹತ್ಯೆ ಪ್ರಕರಣದ ತನಿಖೆಯ ಹೊಣೆಯನ್ನು ನೀಡಬೇಕು’ ಎಂದು ಕೋರಿ ಡಾ.ಕಲಬುರ್ಗಿ ಅವರ ಪತ್ನಿ ಉಮಾದೇವಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ, ಆರು ವಾರಗಳೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ನೋಟಿಸ್‌ ಜಾರಿ ಮಾಡಿತು.

‘ಮಹಾರಾಷ್ಟ್ರದ ವಿಚಾರವಾದಿಗಳಾದ ನರೇಂದ್ರ ಧಾಬೋಲ್ಕರ್‌ ಹಾಗೂ ಗೋವಿಂದರಾವ್‌ ಪಾನ್ಸರೆ ಅವರ ಹತ್ಯೆ ಪ್ರಕರಣಗಳಿಗೂ ಡಾ.ಕಲಬುರ್ಗಿ ಅವರ ಹತ್ಯೆ ಪ್ರಕರಣಕ್ಕೂ ಸಾಮ್ಯತೆ ಇದೆ’ ಎಂದು ಮೇಲ್ಮನವಿಯಲ್ಲಿ ತಿಳಿಸಲಾಗಿದ್ದು, ಮಹಾರಾಷ್ಟ್ರ ಸರ್ಕಾರಕ್ಕೂ ಪ್ರತಿಕ್ರಿಯೆ ಕೋರಿ ನೋಟಿಸ್‌ ಜಾರಿ ಮಾಡಲಾಗಿದೆ.

ADVERTISEMENT

‘ಗೋವಾದಲ್ಲಿ ನಡೆದಿದ್ದ ಬಾಂಬ್‌ ಸ್ಫೋಟದಲ್ಲಿ ಭಾಗಿಯಾಗಿರುವ ಆರೋಪಿಗಳು ಈ ಮೂವರ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗಿ
ರಬಹುದು’ ಎಂಬ ಶಂಕೆ ಇರುವುದರಿಂದ ಗೋವಾ ಸರ್ಕಾರಕ್ಕೂ ನ್ಯಾಯಪೀಠ ನೋಟಿಸ್‌ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.