ADVERTISEMENT

ನಮ್ಮ ಲೆಕ್ಕ ಕೇಳಲು ಅಮಿತ್ ಷಾ ಯಾರು: ಸಿ.ಎಂ ತಿರುಗೇಟು

​ಪ್ರಜಾವಾಣಿ ವಾರ್ತೆ
Published 11 ಜನವರಿ 2018, 9:09 IST
Last Updated 11 ಜನವರಿ 2018, 9:09 IST
ಮಲೆ ಮಹದೇಶ್ವರ ಬೆಟ್ಟದಲ್ಲಿ ವಾಸ್ತವ್ಯ ಹೂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಬೆಳಗ್ಗೆ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಮಲೆ ಮಹದೇಶ್ವರ ಬೆಟ್ಟದಲ್ಲಿ ವಾಸ್ತವ್ಯ ಹೂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಬೆಳಗ್ಗೆ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.   

ಮೈಸೂರು: 'ನಮ್ಮ ಲೆಕ್ಕ ಕೇಳಲು ಅಮಿತ್ ಷಾ ಯಾರು? ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದಾಗ ಕೇಂದ್ರಕ್ಕೆ ಗುಜರಾತ್ ಸರ್ಕಾರ ಲೆಕ್ಕ ನೀಡಿತ್ತೇ? ಹಣಕಾಸು ವ್ಯವಸ್ಥೆ ಬಗ್ಗೆ ಅವರಿಗೇನು ಗೊತ್ತು?' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಗುರುವಾರ ತಿರುಗೇಟು ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿ, 'ನಮ್ಮಿಂದ ಸಂಗ್ರಹವಾದ ತೆರಿಗೆ ಹಣವನ್ನು ಕೇಂದ್ರ ಸರ್ಕಾರ ನಮಗೆ ನೀಡಿದೆ ಅಷ್ಟೆ. ಅದರಲ್ಲೂ ₹ 11 ಸಾವಿರ ಕೋಟಿ ಕಡಿಮೆ ನೀಡಿದೆ. ಆ ಲೆಕ್ಕವನ್ನು ನಾನು ವಿಧಾನಮಂಡಲ ಹಾಗೂ ರಾಜ್ಯದ ಜನರಿಗೆ ನೀಡುತ್ತೇನೆ' ಎಂದರು.

'ಬರ ಪರಿಹಾರ ಅನುದಾನ ನೀಡುವಲ್ಲಿ ಕೇಂದ್ರ ತಾರತಮ್ಯ ನೀತಿ ಅನುಸರಿಸುತ್ತಿದೆ. ನಮಗೆ ಕೇವಲ ₹ 1500 ಕೋಟಿ ನೀಡಿ ಮಹಾರಾಷ್ಟ್ರ, ಗುಜರಾತ್ ಗೆ ₹ 3 ಸಾವಿರ ಕೋಟಿಗೂ ಅಧಿಕ ಅನುದಾನ ಬಿಡುಗಡೆ ಮಾಡಿದೆ' ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.