ADVERTISEMENT

ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ

​ಪ್ರಜಾವಾಣಿ ವಾರ್ತೆ
Published 12 ಜನವರಿ 2018, 19:16 IST
Last Updated 12 ಜನವರಿ 2018, 19:16 IST
ನ್ಯಾಯಮೂರ್ತಿ ಕೆ.ಎನ್‌.ಫಣೀಂದ್
ನ್ಯಾಯಮೂರ್ತಿ ಕೆ.ಎನ್‌.ಫಣೀಂದ್   

ಬೆಂಗಳೂರು: ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಮೇಲ್ಮನವಿ ವಿಚಾರಣೆಯಿಂದ ಹೈಕೋರ್ಟ್‌ ನ್ಯಾಯಮೂರ್ತಿ ಕೆ.ಎನ್‌.ಫಣೀಂದ್ರ ಹಿಂದೆ ಸರಿದಿದ್ದಾರೆ.

‘ನಾಲ್ಕು ವರ್ಷಗಳ ಅವಧಿಯಲ್ಲಿ ಸ್ವಾಮೀಜಿ ನನ್ನ ಮೇಲೆ 154 ಬಾರಿ ಅತ್ಯಾಚಾರ ನಡೆಸಿದ್ದಾರೆ’ ಎಂದು ರಾಮಕಥಾ ಗಾಯಕಿ ಮಾಡಿದ್ದ ಆರೋಪ ಪ್ರಕರಣದಲ್ಲಿ ಸ್ವಾಮೀಜಿಯನ್ನು ಖುಲಾಸೆ ಮಾಡಿರುವ ಸೆಷನ್ಸ್‌ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ.

ರಾಮಕಥಾ ಗಾಯಕಿ ಸಲ್ಲಿಸಿರುವ ಈ ಕ್ರಿಮಿನಲ್ ಮೇಲ್ಮನವಿ ಗುರುವಾರ ಫಣೀಂದ್ರ ಅವರ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ADVERTISEMENT

‘ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯೊಂದರ ವಿಚಾರಣೆ ವೇಳೆ ಪ್ರಕರಣದ ಸಂತ್ರಸ್ತೆ ನನ್ನ ವಿರುದ್ಧ ಅವಿಶ್ವಾಸ ವ್ಯಕ್ತಪಡಿಸಿ ರಾಷ್ಟ್ರಪತಿ ಹಾಗೂ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದರು.

ಆ ಬಳಿಕ ಪ್ರಕರಣದ ವಿಚಾರಣೆ ಯಿಂದ ನಾನು ಹಿಂದೆ ಸರಿದಿದ್ದೆ. ಹೀಗಾಗಿ ಮೇಲ್ಮನವಿ ವಿಚಾರಣೆಯಿಂದಲೂ ಈಗ ಹಿಂದೆ ಸರಿಯುತ್ತಿದ್ದೇನೆ ಎಂದು ನ್ಯಾಯಮೂರ್ತಿಗಳು ತಿಳಿಸಿದರು.

ಫಣೀಂದ್ರ  ವಿಚಾರಣೆಯಿಂದ ಹಿಂದೆ ಸರಿಯುವ ಮೂಲಕ ರಾಘವೇಶ್ವರ ಭಾರತೀ ಸ್ವಾಮೀಜಿ ವಿರುದ್ಧದ ಪ್ರಕರಣದಲ್ಲಿ ಒಂಬತ್ತನೇ ಬಾರಿಗೆ ಮತ್ತೊಬ್ಬ ನ್ಯಾಯಮೂರ್ತಿ ಹಿಂದೆ ಸರಿದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.