ADVERTISEMENT

‘ಕೋಮು ಗಲಭೆಗೂ ಇಲ್ಯಾಸ್‌ ಹತ್ಯೆಗೂ ಸಂಬಂಧ ಇಲ್ಲ’

​ಪ್ರಜಾವಾಣಿ ವಾರ್ತೆ
Published 13 ಜನವರಿ 2018, 19:30 IST
Last Updated 13 ಜನವರಿ 2018, 19:30 IST

ಬೆಂಗಳೂರು: ಇಲ್ಯಾಸ್‌ ಹತ್ಯೆಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮು ಗಲಭೆಗಳಿಗೂ ಯಾವುದೇ ಸಂಬಂಧ ಇಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು.

ಇಲ್ಯಾಸ್‌ ಕಾಂಗ್ರೆಸ್‌ನಲ್ಲಿ ಕೆಲ ದಿನಗಳವರೆಗೆ ಇದ್ದದ್ದು ನಿಜ. ಆದರೆ, ಆತ ಸರಿಯಿಲ್ಲ ಎಂದು ತಿಳಿದ ಬಳಿಕ ಪಕ್ಷದಿಂದ ಹೊರ ಹಾಕಲಾಗಿತ್ತು ಎಂದರು.

ಬಲಪಂಥೀಯರು ಮತ್ತು ಅವರನ್ನು ವಿರೋಧಿಸುವವರು ಸಮಾಧಾನವಾಗಿ ಇದ್ದರೆ ರಾಜ್ಯವು ಶಾಂತವಾಗಿ ಇರುತ್ತದೆ. ದಕ್ಷಿಣ ಕನ್ನಡ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳು ಶಾಂತಿಯುತವಾಗಿವೆ. ದಕ್ಷಿಣ ಕನ್ನಡದ ಕೆಲವರು ರಾಜಕೀಯ ಕಾರಣಕ್ಕಾಗಿ ಅಶಾಂತಿ ಉಂಟು ಮಾಡುತ್ತಿದ್ದಾರೆ. ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.

ADVERTISEMENT

ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿರುವವರನ್ನು ಉಗ್ರಗಾಮಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿದ್ದಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.