ADVERTISEMENT

ಖಾದರ್ ಎಂಬ ಕಾರಣಕ್ಕೆ ಎರಡೆರಡು ಬಾರಿ ತಪಾಸಣೆ

​ಪ್ರಜಾವಾಣಿ ವಾರ್ತೆ
Published 13 ಜನವರಿ 2018, 19:30 IST
Last Updated 13 ಜನವರಿ 2018, 19:30 IST

ಧಾರವಾಡ: ‘ನನ್ನ ಹೆಸರಿನಲ್ಲಿರುವ ಖಾದರ್‌ ಎಂಬುದನ್ನು ಕೇಳಿದಾಕ್ಷಣ ವಿಮಾನ ನಿಲ್ದಾಣಗಳಲ್ಲಿ ಅಧಿಕಾರಿಗಳು ಅನುಮಾನದಿಂದ ಎರಡೆರಡು ಬಾರಿ ಪರಿಶೀಲನೆ ಮಾಡುತ್ತಾರೆ’ ಎಂದು ಆಹಾರ ಇಲಾಖೆ ಸಚಿವ ಯು.ಟಿ. ಖಾದರ್ ಹೇಳಿದರು.

ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ವೆಲ್‌ಫೇರ್‌ ಅಸೋಸಿಯೇಷನ್‌ ಶನಿವಾರ ಇಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ ಮುಸ್ಲಿಂ ಸಮುದಾಯದ ಅಧಿಕಾರಿಗಳನ್ನೂ ಅನುಮಾನದಿಂದ ಕಾಣುವ ಪರಿಸ್ಥಿತಿ ಸಮಾಜದಲ್ಲಿದೆ. ಆದ್ದರಿಂದ, ತಾಳ್ಮೆಯಿಂದ ಕರ್ತವ್ಯ ನಿರ್ವಹಿಸಬೇಕು’ ಎಂದು ಸಲಹೆ ಮಾಡಿದರು.

‘ಇತರ ಅಧಿಕಾರಿಗಳಿಗೆ ಹೋಲಿಸಿದರೆ ಮುಸ್ಲಿಂ ಸಮಾಜದ ಅಧಿಕಾರಿಗಳಿಗೆ ಹೆಚ್ಚು ಸವಾಲುಗಳಿವೆ’ ಎಂದರು.

ADVERTISEMENT

ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಂಗಳೂರಿನಲ್ಲಿ ಹತ್ಯೆಯಾಗಿರುವ ಕಾಂಗ್ರೆಸ್ ಕಾರ್ಯಕರ್ತ ಹಾಗೂ ಟಾರ್ಗೆಟ್ ಗ್ರೂಪ್ ಸದಸ್ಯ ಇಲ್ಯಾಸ್‌ನ ಕೊಲೆ ಯಾವ ಕಾರಣಕ್ಕೆ ಆಗಿದೆ ಎಂಬುದರ ತನಿಖೆಯಾಗಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.