ಬೆಂಗಳೂರು: ರಾಜ್ಯದಲ್ಲಿ ಶನಿವಾರ ಸಂಭವಿಸಿದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 11 ಮಂದಿ ಮೃತಪಟ್ಟಿದ್ದಾರೆ.
7 ಮಂದಿ ಸಾವು: ಹಾಸನ ತಾಲ್ಲೂಕಿನ ಶಾಂತಿಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೆಳಗಿನ ಜಾವ 3.30ರ ಸಮಯದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಐರಾವತ ಬಸ್ ರಸ್ತೆ ಬದಿಯ 20 ಅಡಿ ಆಳಕ್ಕೆ ಬಿದ್ದು ಚಾಲಕ ಮತ್ತು ನಿರ್ವಾಹಕ ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ. 38 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಮೃತರ ಕುಟುಂಬಕ್ಕೆ ತಲಾ ₹ 3 ಲಕ್ಷ ಪರಿಹಾರ ಹಾಗೂ ಗಾಯಾಳುಗಳ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ನಿಗಮದಿಂದ ಭರಿಸಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ತಿಳಿಸಿದ್ದಾರೆ.
ಮೂವರ ಸಾವು: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಗಾಜಲಬಾವಿ ಗ್ರಾಮದ ಬಳಿ ಶನಿವಾರ ನಸುಕಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂರು ಮಂದಿ ಸಾವಿಗೀಡಾಗಿದ್ದಾರೆ. ನಾಲ್ವರು ಗಾಯಗೊಒಂಡಿದ್ದಾರೆ.
ಒಬ್ಬ ಸಾವು: ಕಾರವಾರ ತಾಲ್ಲೂಕಿನ ಚೆಂಡಿಯಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಮರಕ್ಕೆ ಕ್ರೂಸರ್ ಡಿಕ್ಕಿ ಹೊಡೆದು ಒಬ್ಬರು ಮೃತಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.