ADVERTISEMENT

ಕಾನ್‌ಸ್ಟೆಬಲ್ ಕಿರುಕುಳ; ಆಟೊ ಚಾಲಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 16 ಜನವರಿ 2018, 19:30 IST
Last Updated 16 ಜನವರಿ 2018, 19:30 IST

ಕಲಬುರ್ಗಿ: ಜಿಲ್ಲೆಯ ಜೇವರ್ಗಿಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್‌ವೊಬ್ಬರ ಕಿರುಕುಳ ತಾಳದೆ ಆಟೊ ಚಾಲಕ ರಾಮು ತಳವಾರ (22) ಸೋಮವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಮು ಅವರ ಸಂಬಂಧಿಕರು ಮತ್ತು ನಾಗರಿಕರು ನ್ಯಾಯ ಕೊಡಿಸಬೇಕು ಮತ್ತು ಸಾವಿಗೆ ಕಾರಣರಾಗಿರುವ ಕಾನ್‌ಸ್ಟೆಬಲ್ ಅವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿ ಮಂಗಳವಾರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

‘ರಾಮು, ಮೂವರೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದ. ಇವರನ್ನು ತಡೆದ ಕಾನ್‌ಸ್ಟೆಬಲ್‌ ಮಲ್ಲಿಕಾರ್ಜುನ ಭಾಸಗಿ ಮನಬಂದಂತೆ ಥಳಿಸಿದ್ದರು. ₹25 ಸಾವಿರ ದಂಡ ಪಾವತಿಸುವಂತೆ ಕಿರುಕುಳ ನೀಡಿದ್ದರು. ಇದರಿಂದ ಭಯಭೀತನಾದ ಮಗ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದು ಮೃತ ರಾಮು ಅವರ ತಾಯಿ ವಿಜಯಲಕ್ಷ್ಮಿ ತಳವಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ADVERTISEMENT

ಅಮಾನತು: ಕಾನ್‌ಸ್ಟೆಬಲ್‌ ಮಲ್ಲಿಕಾರ್ಜುನ ಅವರನ್ನು ಜಿಲ್ಲಾ  ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್ ಮಂಗಳವಾರ ಅಮಾನತು ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.