ADVERTISEMENT

ಸಚಿವ ಅನಂತಕುಮಾರ ಹೆಗಡೆ ಕಚೇರಿ ಎದುರು ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2018, 10:18 IST
Last Updated 17 ಜನವರಿ 2018, 10:18 IST
ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕಚೇರಿ ಎದುರು ಧರಣಿ ಕುಳಿತುಕೊಳ್ಳಲು ಮೆರವಣಿಗೆಯಲ್ಲಿ ಬಂದ ಪ್ರತಿಭಟನಾಕಾರರು
ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕಚೇರಿ ಎದುರು ಧರಣಿ ಕುಳಿತುಕೊಳ್ಳಲು ಮೆರವಣಿಗೆಯಲ್ಲಿ ಬಂದ ಪ್ರತಿಭಟನಾಕಾರರು   

ಶಿರಸಿ: ಅಂಗನವಾಡಿ ಬಿಸಿಯೂಟ, ವಿವಿಧ ಯೋಜನೆಗಳಿಗೆ ಅನುದಾನ ಕಡಿತ, ಆಶಾ ಕಾರ್ಯಕರ್ತೆಯರಿಗೆ ಕೇಂದ್ರದಿಂದ ವೇತನ ಹೆಚ್ಚಳ ಮಾಡದಿರುವುದನ್ನು ಖಂಡಿಸಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಕಚೇರಿ ಎದುರು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

45 ನೇ ಭಾರತ ರಾಷ್ಟ್ರೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸು ಜಾರಿಗೆ ತರುವಂತೆಯೂ ಪ್ರತಿಭಟನಾಕಾರರು ಆಗ್ರಹಿಸಿದರು.

ಸಿಐಟಿಯು ಸಂಯೋಜಿತ ಸಂಘಗಳಾದ ರಾಜ್ಯ ಅಂಗನವಾಡಿ ನೌಕರರ ಸಂಘ, ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಸಂಘ, ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ADVERTISEMENT

ಬಳ್ಳಾರಿ, ಕೊಪ್ಪಳ, ಗದಗ, ಹೊನ್ನಾಳಿ, ಬ್ಯಾಡಗಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ ಜಿಲ್ಲೆಗಳ 3000ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಚಿತ್ರದುರ್ಗದಲ್ಲೂ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.