ADVERTISEMENT

ಹಿರಿಯ ನಟ, ನಿರ್ದೇಶಕ ಕಾಶಿನಾಥ್‌ ವಿಧಿವಶ

​ಪ್ರಜಾವಾಣಿ ವಾರ್ತೆ
Published 18 ಜನವರಿ 2018, 5:11 IST
Last Updated 18 ಜನವರಿ 2018, 5:11 IST
ಕಾಶಿನಾಥ್‌
ಕಾಶಿನಾಥ್‌   

ಬೆಂಗಳೂರು: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಹಿರಿಯ ನಟ, ನಿರ್ದೇಶಕ ಕಾಶಿನಾಥ್‌ ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದಾಗಿ ಅವರು ಎರಡು ದಿನಗಳಿಂದ ನಗರದ ಶಂಕರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕಾಶಿನಾಥ್‌ ಕೊನೆಯುಸಿರೆಳೆದರು.

ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯ ಸಿನಿಮಾಗಳನ್ನು ಕಾಶಿನಾಥ್‌ ನಿರ್ಮಿಸಿದ್ದರು. ಉಪೇಂದ್ರ, ವಿ.ಮನೋಹರ್‌ ಮತ್ತು ಸುನೀಲ್‌ಕುಮಾರ್‌ ದೇಸಾಯಿರಂತಹ ಪ್ರತಿಭೆಗಳನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದರು.

ADVERTISEMENT

ನಟನೆ, ನಿರ್ದೇಶನ, ಸಂಗೀತ ನಿರ್ದೇಶನ ಹಾಗೂ ಸಿನಿಮಾ ನಿರ್ಮಾಣದಲ್ಲಿ ಇವರು ತಮ್ಮದೇ ಆದ ಛಾಪನ್ನು ಮೂಡಿಸಿದ್ದರು.

ಚಿತ್ರರಂಗದಲ್ಲಿ ಹೊಸ ಅಲೆಯನ್ನೆಬ್ಬಿಸಿದ್ದ ಅವರು ನಟನೆ, ನಿರ್ದೇಶನ, ಸಂಗೀತ ನಿರ್ದೇಶನ ಹಾಗೂ ಚಿತ್ರ ನಿರ್ಮಾಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು.

ಇವರು ನಟಿಸಿರುವ ‘ಅನುಭವ’, ‘ಅನಂತನ ಅವಾಂತರ’, ’ಅವಳೆ ನನ್ನ ಹೆಂಡ್ತಿ’ ಮತ್ತು ’ಹೆಂಡತಿ ಎಂದರೆ ಹೇಗಿರಬೇಕು’ ಸಿನಿಮಾಗಳು ಜನಮಾನಸವನ್ನು ತಲುಪಿದ್ದವು. ‘ಜವಾನಿ ಜಿಂದಾಬಾದ್‌’ ಹೆಸರಲ್ಲಿ ಹಿಂದಿಗೆ ರಿಮೇಕ್‌ಗೊಂಡ ‘ಅವಳೆ ನನ್ನ ಹೆಂಡ್ತಿ’ ಚಿತ್ರದಲ್ಲಿ ಅಮೀರ್‌ ಖಾನ್‌ ಮತ್ತು ಫರ್ಹಾ ನಟಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.