ADVERTISEMENT

ಕರಿಘಟ್ಟದಲ್ಲಿ ಬೆಂಕಿ: 10 ಎಕರೆಗೂ ಹೆಚ್ಚು ಅರಣ್ಯ ನಾಶ

​ಪ್ರಜಾವಾಣಿ ವಾರ್ತೆ
Published 18 ಜನವರಿ 2018, 19:30 IST
Last Updated 18 ಜನವರಿ 2018, 19:30 IST
ಕರಿಘಟ್ಟದಲ್ಲಿ ಬೆಂಕಿ: 10 ಎಕರೆಗೂ ಹೆಚ್ಚು ಅರಣ್ಯ ನಾಶ
ಕರಿಘಟ್ಟದಲ್ಲಿ ಬೆಂಕಿ: 10 ಎಕರೆಗೂ ಹೆಚ್ಚು ಅರಣ್ಯ ನಾಶ   

ಶ್ರೀರಂಗಪಟ್ಟಣ: ತಾಲ್ಲೂಕಿನ ಕರಿಘಟ್ಟ ಅರಣ್ಯಕ್ಕೆ ಗುರುವಾರ ಬೆಂಕಿ ಬಿದ್ದಿದ್ದು ಸುಮಾರು 10 ಎಕರೆಗೂ ಹೆಚ್ಚು ಅರಣ್ಯ ಸುಟ್ಟು ಹೋಗಿದೆ.

ಕರಿಘಟ್ಟದ ಶ್ರೀನಿವಾಸ ದೇವಾಲಯಕ್ಕೆ ತೆರಳುವ ಮೆಟ್ಟಿಲುಗಳ ಮಾರ್ಗದಲ್ಲಿ ಬೆಂಕಿ ಕಾಣಿಸಿಕೊಂಡು ಮೇಲ್ಮುಖವಾಗಿ ಹರಡಿದೆ. ಬೆಂಕಿಯ ಕೆನ್ನಾಲಿಗೆಗೆ ಅಮೂಲ್ಯ ಮರಗಳು ಸುಟ್ಟು ಹೋಗಿವೆ. ಲಾಲೆ ಹುಲ್ಲು ಮೂಲಕ ಬೆಂಕಿ ವೇಗವಾಗಿ ಹರಡಿದೆ. ಅರಣ್ಯ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಿದರು.

10 ಎಕರೆ ಅರಣ್ಯ ಭಸ್ಮ (ಹನೂರು ವರದಿ): ಕಾವೇರಿ ವನ್ಯಜೀವಿಧಾಮದಲ್ಲಿ ಕಾಳ್ಗಿಚ್ಚಿಗೆ 10 ಎಕರೆ ಅರಣ್ಯ ಸುಟ್ಟು ಭಸ್ಮವಾಗಿವೆ. ಕೊತ್ತನೂರು ವನ್ಯಜೀವಿ ವಲಯದಲ್ಲಿ ಬುಧವಾರ ರಾತ್ರಿ ಸಣ್ಣದಾಗಿ ಕಾಣಿಸಿಕೊಂಡ ಬೆಂಕಿ ಕ್ಷಣದಲ್ಲೇ ವ್ಯಾಪಿಸಿದೆ. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿ ಬೆಂಕಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ADVERTISEMENT

ಕಿಡಿಗೇಡಿಗಳ ಕೃತ್ಯ: ಕಾವೇರಿ ನದಿಯಲ್ಲಿ ಮೀನು ಹಿಡಿಯುತ್ತಿದ್ದ ಹಾಗೂ ಅರಣ್ಯದೊಳಗೆ ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದ ಕೆಲ ಆರೋಪಿ
ಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿ ಜೈಲಿಗಟ್ಟಿದ್ದರು. ಹೊರಗೆ ಬಂದ ಆರೋಪಿಗಳು ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.